
ಬಾಗಲಕೋಟೆ, 06 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ: ಮತದಾನ ಜಾಗೃತಿ ಮೂಡಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ನಗರದಲ್ಲಿ ಬೀದಿಗಿಳಿದು ಜನರಿಗೆ ಮತದಾನದ ಮಹತ್ವವನ್ನು ತಿಳಿಸಿದರು.
“Vote Today, Safe Tomorrow” ಎಂಬ ಘೋಷಣೆಗಳನ್ನು ಮೊಳಗಿಸುತ್ತಾ ಯುವಕರು ಹಾಗೂ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಕಡ್ಡಾಯವಾಗಿ ಮತದಾನ ಮಾಡುವಂತೆ ಮನವಿ ಮಾಡಿದರು.
ಈ ವೇಳೆ GEN-Z ಯುವಜನರು ಮತದಾನವು ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಹಲವು ವಿದ್ಯಾರ್ಥಿಗಳು ಹಾಗೂ ಯುವಕರು ಭಾಗವಹಿಸಿ ಮತದಾನ ಜಾಗೃತಿ ಅಭಿಯಾನಕ್ಕೆ ಕೈಜೋಡಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande