
ಬಾಗಲಕೋಟೆ, 06 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ: ನಗರದ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಲೋಕಸಭಾ ಸದಸ್ಯರಾದ ಗೋವಿಂದ ಕಾರಜೋಳ, ಶಾಸಕರಾದ ಸಿ.ಸಿ. ಪಾಟೀಲ್, ಸಿ.ಕೆ. ರಾಮಮೂರ್ತಿ, ಸಿದ್ದು ಪಾಟೀಲ್, ಮಾಜಿ ಶಾಸಕರಾದ ಸಂಜಯ ಪಾಟೀಲ್, ಪಿ. ರಾಜೀವ್, ಮುರುಗೇಶ ನಿರಾಣಿ ಹಾಗೂ ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರಾದ ಶಾಂತಗೌಡ ಪಾಟೀಲ್ ಸೇರಿದಂತೆ ಸಂಘ ಪರಿವಾರದ ಮುಖಂಡರು, ಪ್ರಮುಖರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande