ಬಿಜೆಪಿ ಸಂಸ್ಥಾಪನಾ ದಿನ ; ನಿತಿನ್ ನವೀನ ಶುಭಾಶಯ
ನವದೆಹಲಿ, 06 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಸಂಸ್ಥಾಪನಾ ದಿನವನ್ನು ಇಂದು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದೆ. ಪಕ್ಷವು 1980ರ ಏಪ್ರಿಲ್ 6ರಂದು ಸ್ಥಾಪನೆಯಾಗಿ, ಇಂದಿಗೆ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷಗಳಲ್ಲಿ ಒಂದಾಗಿ ಬೆಳೆದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ
Nitin naveen


ನವದೆಹಲಿ, 06 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಸಂಸ್ಥಾಪನಾ ದಿನವನ್ನು ಇಂದು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದೆ. ಪಕ್ಷವು 1980ರ ಏಪ್ರಿಲ್ 6ರಂದು ಸ್ಥಾಪನೆಯಾಗಿ, ಇಂದಿಗೆ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷಗಳಲ್ಲಿ ಒಂದಾಗಿ ಬೆಳೆದಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಈ ಸಂದರ್ಭದಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ವೀಡಿಯೊ ಹಂಚಿಕೊಂಡಿರುವ ನಿತಿನ್ ನವೀನ್, ಜನಸಂಘದಿಂದ ಆರಂಭವಾದ ಪಕ್ಷದ ಪಯಣವು ಇಂದು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದಿರುವುದು ಕಾರ್ಯಕರ್ತರ ತ್ಯಾಗ, ಪರಿಶ್ರಮ ಮತ್ತು ನಿಷ್ಠೆಯ ಫಲ ಎಂದು ಹೇಳಿದ್ದಾರೆ. ಅವರ ‘ಅಂತ್ಯೋದಯ’ ತತ್ವವನ್ನು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಾಕಾರಗೊಳಿಸಲಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಸಂದರ್ಭದಲ್ಲಿ ‘ರಾಷ್ಟ್ರ ಮೊದಲು’ ಎಂಬ ಸಂಕಲ್ಪವನ್ನು ಪುನರುಚ್ಚರಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದ ಅವರು, ‘ಅಭಿವೃದ್ಧಿ ಹೊಂದಿದ ಭಾರತ’ ನಿರ್ಮಾಣದತ್ತ ಒಗ್ಗಟ್ಟಿನಿಂದ ಮುಂದುವರಿಯುವಂತೆ ಕರೆ ನೀಡಿದರು.

ಇದೇ ವೇಳೆ ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್, ಜೆ.ಪಿ. ನಡ್ಡಾ, ಕಿರಣ್ ರಿಜಿಜು, ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಶುಭಾಶಯಗಳನ್ನು ತಿಳಿಸಿದ್ದು, ಯೋಗಿ ಆದಿತ್ಯನಾಥ್ ಸೇರಿದಂತೆ ಅನೇಕ ರಾಜ್ಯಗಳ ಮುಖ್ಯಮಂತ್ರಿಗಳೂ ಸಂಸ್ಥಾಪನಾ ದಿನದ ಸಂದೇಶಗಳನ್ನು ಹಂಚಿಕೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande