ಬೆಳೆ ವಿಮೆ ಪ್ರಸ್ತಾವನೆ ತಿರಸ್ಕೃತ : ಆಕ್ಷೇಪಣೆ ಸಲ್ಲಿಸಲು ರೈತರಿಗೆ ಸೂಚನೆ
ದಾವಣಗೆರೆ, 06 ಏಪ್ರಿಲ್ (ಹಿ.ಸ.) : ಆ್ಯಂಕರ್ : 2024-25ನೇ ಸಾಲಿನ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಸಲ್ಲಿಸಲಾದ ಕೆಲ ಬೆಳೆ ವಿಮೆ ಪ್ರಸ್ತಾವನೆಗಳು ತಾಳೆ ಹೊಂದದ ಕಾರಣ ತಿರಸ್ಕೃತಗೊಂಡಿವೆ ಎಂದು ದಾವಣಗೆರೆ ಕೃಷಿ ಇಲಾಖೆ ತಿಳಿಸಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಬೆಳೆ ಸಮೀಕ್ಷೆಯ ದ
ಬೆಳೆ ವಿಮೆ ಪ್ರಸ್ತಾವನೆ ತಿರಸ್ಕೃತ : ಆಕ್ಷೇಪಣೆ ಸಲ್ಲಿಸಲು ರೈತರಿಗೆ ಸೂಚನೆ


ದಾವಣಗೆರೆ, 06 ಏಪ್ರಿಲ್ (ಹಿ.ಸ.) :

ಆ್ಯಂಕರ್ : 2024-25ನೇ ಸಾಲಿನ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಸಲ್ಲಿಸಲಾದ ಕೆಲ ಬೆಳೆ ವಿಮೆ ಪ್ರಸ್ತಾವನೆಗಳು ತಾಳೆ ಹೊಂದದ ಕಾರಣ ತಿರಸ್ಕೃತಗೊಂಡಿವೆ ಎಂದು ದಾವಣಗೆರೆ ಕೃಷಿ ಇಲಾಖೆ ತಿಳಿಸಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ವಿಮೆ ನೋಂದಣಿಯ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿದಾಗ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ತಾಲ್ಲೂಕಿನಾದ್ಯಂತ ಮುಂಗಾರು ಹಂಗಾಮಿನಲ್ಲಿ ಸಲ್ಲಿಸಲಾದ ಒಟ್ಟು 39 ಪ್ರಸ್ತಾವನೆಗಳು ತಿರಸ್ಕೃತಗೊಂಡಿವೆ.

ತಿರಸ್ಕೃತಗೊಂಡ ಪ್ರಸ್ತಾವನೆಗಳ ರೈತರು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಕ್ಷೇಪಣೆ ಸಲ್ಲಿಸುವಾಗ ಕೆಳಗಿನ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಸಲ್ಲಿಸುವುದು ಕಡ್ಡಾಯವಾಗಿದೆ:

2024-25ನೇ ಸಾಲಿನ ಪಹಣಿಯಲ್ಲಿ ವಿಮೆಗೆ ನೋಂದಾಯಿಸಿದ ಬೆಳೆ ವಿವರ, ಬೆಂಬಲ ಬೆಲೆ ಯೋಜನೆ ಪ್ರಯೋಜನ ಪಡೆದಿದ್ದಲ್ಲಿ ಅದರ ರಸೀದಿ, ವಿಮೆ ನೋಂದಾಯಿತ ಬೆಳೆ ಉತ್ಪನ್ನವನ್ನು ಎಪಿಎಂಸಿ ಮಾರುಕಟ್ಟೆಗೆ ಮಾರಾಟ ಮಾಡಿದ ದಾಖಲೆ

ಈ ದಾಖಲೆಗಳನ್ನು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಿದ ಬಳಿಕ ತಾಲ್ಲೂಕು ಮಟ್ಟದ ಸಮಿತಿ ಸಭೆಯಲ್ಲಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದ್ದು, ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸದಿದ್ದಲ್ಲಿ ಅಂತಹ ಪ್ರಸ್ತಾವನೆಗಳನ್ನು ಅಂತಿಮವಾಗಿ ತಿರಸ್ಕರಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ತಿರಸ್ಕೃತ ಪ್ರಸ್ತಾವನೆಗಳ ಪಟ್ಟಿಯನ್ನು ರೈತ ಸಂಪರ್ಕ ಕೇಂದ್ರಗಳು ಹಾಗೂ ಕಸಬಾ, ಆನಗೋಡು ಮತ್ತು ಮಾಯಕೊಂಡ ಕಚೇರಿಗಳ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ರೈತರಿಗೆ ಸೂಚಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande