ಏಪ್ರಿಲ್ 12 ರಂದು ಪ್ರವೇಶ ಪರೀಕ್ಷೆ
ಗದಗ, 06 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಗದಗ, ರೋಣ ಮತ್ತು ಮುಂಡರಗಿ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2026-27 ನೇ ಸಾಲಿಗೆ 6 ನೇ ತರಗತಿ
ಫೋಟೋ


ಗದಗ, 06 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಗದಗ, ರೋಣ ಮತ್ತು ಮುಂಡರಗಿ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2026-27 ನೇ ಸಾಲಿಗೆ 6 ನೇ ತರಗತಿ ದಾಖಲಾತಿ ಪಡೆಯಲು ಪ್ರವೇಶ ಪರೀಕ್ಷೆ ದಿನಾಂಕ 12.04.2026 ರಂದು ಜರುಗಲಿದೆ.

ಅರ್ಜಿ ಸಲ್ಲಿಸಲು ನೋಂದಾಯಿಸಿದ ಪಾಲಕರ, ಪೋಷಕರ ದೂರವಾಣಿ ವಿದ್ಯಾರ್ಥಿಯ ಹೆಸರಿನೊಂದಿಗೆ ಪರೀಕ್ಷಾ ಕೇಂದ್ರದ ಮಾಹಿತಿಯನ್ನು ನಿರ್ದೇಶನಾಲಯ, ಬೆಂಗಳೂರು ರವರಿಂದ ಕಳುಹಿಸಲಾಗಿದೆ. ಸದರಿ ಪರೀಕ್ಷಾ ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಬಹುದಾಗಿದೆ. ತಮಗೆ ನೀಡಿರುವ ಪರೀಕ್ಷಾ ಪ್ರವೇಶ ಪತ್ರಗಳಲ್ಲಿ ಸೂಚಿಸಿರುವ ಪರೀಕ್ಷಾ ಕೇಂದ್ರಕ್ಕೆ ಹಾಜರಿರಲು ಈ ಮೂಲಕ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಗದಗ ಇವರನ್ನು ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande