
ಕೊಪ್ಪಳ, 06 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ನಗರಸಭೆಯ ವ್ಯಾಪ್ತಿಯಲ್ಲಿನ ಆಸ್ತಿ ಮಾಲೀಕರು 2026-27 ನೇ ಸಾಲಿನ ಆಸ್ತಿ ತೆರಿಗೆಯನ್ನು ಏಪ್ರಿಲ್ 30 ರೊಳಗಾಗಿ ಪಾವತಿಸಿ ರಿಯಾಯತಿಯ ಲಾಭ ಪಡೆದುಕೊಳ್ಳುವಂತೆ ಕೊಪ್ಪಳ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಏ.30 ರೊಳಗೆ ಆಸ್ತಿ ತೆರಿಗೆ ಪಾವತಿಸಿದಲ್ಲಿ ಶೇ. 5 ರಷ್ಟು ವಿನಾಯಿತಿ ನೀಡಲಾಗುವುದು. ಮೇ ಹಾಗೂ ಜೂನ್ ತಿಂಗಳಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸಿದಲ್ಲಿ ಯಾವುದೇ ರಿಯಾಯಿತಿ ಹಾಗೂ ದಂಡ ಇರುವುದಿಲ್ಲ.
ಜುಲೈ ತಿಂಗಳಿನಿಂದ ಶೇ.2 ರಷ್ಟು ದಂಡದೊಂದಿಗೆ ತೆರಿಗೆ ಪಾವತಿಸಬೇಕಾಗುತ್ತದೆ. ಆದ್ದರಿಂದ ಆಸ್ತಿ ಮಾಲೀಕರು ತಮ್ಮ ನಿವೇಶನಗಳು ಹಾಗೂ ಕಟ್ಟಡಗಳ ಆಸ್ತಿ ಕರವನ್ನು ಏಪ್ರಿಲ್ ಮಾಹೆಯೊಳಗೆ ಪಾವತಿಸಿ, ರಿಯಾಯಿತಿ ಲಾಭವನ್ನು ಪಡೆದುಕೊಳ್ಳಬೇಕೆಂದು ನಗರಸಭೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್