
ಬಳ್ಳಾರಿ, 06 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಳ್ಳಾರಿಯ ಮಹಿಳಾ ಕ್ರಿಕೆಟ್ ಅಕಾಡೆಮಿಯು ಏಪ್ರಿಲ್ 11, 13, 15 ಮತ್ತು 17 ವರ್ಷದ ವಯೋಮಿತಿಯ ಒಳಗಿನ ಮಹಿಳಾ ಕ್ರಿಕೆಟ್ ಪಂದ್ಯಾವಳಿಯನ್ನು ನಡೆಸಲು ಉದ್ದೇಶಿಸಿದ್ದು, ನಗರದ ಕಿತ್ತೂರು ರಾಣಿ ಚೆನ್ನಮ್ಮ ಪ್ರೌಢಶಾಲೆಯ ಆವರಣದಲ್ಲಿ ಕ್ರೀಡಾಪಟುಗಳ ಆಯ್ಕೆಯನ್ನು ಸೋಮವಾರ ನಡೆಸಿತು.
ಆಯ್ಕೆ ಪ್ರಕ್ರಿಯೆಯಲ್ಲಿ 64 ಬಾಲಕಿಯರು ಪಾಲ್ಗೊಂಡು, 28 ಬಾಲಕಿಯರು ಆಯ್ಕೆಯಾಗಿದ್ದಾರೆ ಎಂದು ಅಕಾಡೆಮಿಯ ಸಂಚಾಲಕರಾದ ಬಿ.ಎಚ್.ಎಂ. ವಿರೂಪಾಕ್ಷಯ್ಯ ಅವರು ತಿಳಿಸಿದ್ದಾರೆ.
ಸಂದರ್ಶನದಲ್ಲಿ ಆಯ್ಕೆಯಾದ ಕ್ರೀಡಾಪಟುಗಳಿಗೆ ಕ್ರಿಕೆಟ್ ಕಿಟ್ ಮತ್ತು ಡ್ರೆಸ್ ಉಚಿತವಾಗಿ ನೀಡಲಾಗುತ್ತದೆ. ಕ್ರೀಡಾಪಟುಗಳ ಶಿಕ್ಷಣಕ್ಕೆ ನೆರವು ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಅಕಾಡೆಮಿಯ ಕಾರ್ಯದರ್ಶಿ ನಾಗವೇಣಿ, ಸಂಘಟನಾ ಕಾರ್ಯದರ್ಶಿ ರೇಣುಕಾ ಸೇರಿ ಅನೇಕರು ಈ ಸಂದರ್ಭದಲ್ಲಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್