
ಕೊಪ್ಪಳ, 06 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2026-27ನೇ ಸಾಲಿನಲ್ಲಿ ಪ್ರಾಯೋಜನೆಯಡಿಯಲ್ಲಿ ವಿವಿಧ ಸಂಘ-ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳಿಗೆ ಅಥವಾ ಇಲಾಖೆಯ ಇನ್ನಿತರ ಮೆರವಣಿಗೆ ಕಾರ್ಯಕ್ರಮಗಳಿಗೆ ಕಲಾತಂಡಗಳನ್ನು ನಿಯೋಜಿಸಲು ಉತ್ತಮ ವೇಷಭೂಷಣ ಹಾಗೂ ವಾದ್ಯಪರಿಕರಗಳನ್ನು ಒಳಗೊಂಡ ಜಿಲ್ಲೆಯ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ತಂಡಗಳು ಮೇ 6 ರೊಳಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ತಮ್ಮ ಹಾಗೂ ತಮ್ಮ ಕಲಾತಂಡದ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್