
ಕಂಪ್ಲಿ, 06 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಸತಿ ಮತ್ತು ವಾಣಿಜ್ಯ ಉದ್ದೇಶದ ಆಸ್ತಿಗಳ ತೆರಿಗೆಯನ್ನು 2026-27ನೇ ಸಾಲಿಗೆ ಅನ್ವಯವಾಗುವಂತೆ ಹೆಚ್ಚಳ ಮಾಡಲಾಗಿದೆ ಎಂದು ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ನಗರಾಡಳಿತ ನಿರ್ದೇಶನಾಲಯದ ಸುತ್ತೋಲೆ ಮತ್ತು ಕರ್ನಾಟಕ ಪುರಸಭೆಗಳ ಕಾಯ್ದೆ 1964ರ ತಿದ್ದುಪಡಿ ನಿಯಮಗಳನ್ವಯ ಈ ಕ್ರಮ ಕೈಗೊಳ್ಳಲಾಗಿದೆ.
ಸರ್ಕಾರದ ಮಾರ್ಗಸೂಚಿಯಂತೆ ಆಸ್ತಿ ತೆರಿಗೆಯನ್ನು ಮಾರುಕಟ್ಟೆ ಮೌಲ್ಯದ ಆಧಾರದ ಮೇಲೆ ಪರಿಷ್ಕರಿಸುವುದು ಕಡ್ಡಾಯವಾಗಿದೆ.
ಕಂಪ್ಲಿ ಪುರಸಭೆ ವ್ಯಾಪ್ತಿಯ ಎಲ್ಲಾ ಆಸ್ತಿ ಮಾಲೀಕರಿಗೆ ಈ ಪರಿಷ್ಕೃತ ದರ ಅನ್ವಯವಾಗಲಿದೆ. ವಸತಿ ಆಸ್ತಿಗಳಿಗೆ ಶೇ.05 ರಷ್ಟು ತೆರಿಗೆ ಹೆಚ್ಚಳ, ವಾಣಿಜ್ಯ ಮತ್ತು ಕೈಗಾರಿಕಾ ಆಸ್ತಿಗಳ ಖಾಲಿ ನಿವೇಶನ ಹಾಗೂ ಕಟ್ಟಡಗಳಿಗೆ ಶೇ.05 ರಷ್ಟು ತೆರಿಗೆ ಹೆಚ್ಚಳ ಮಾಡಲಾಗಿದ್ದು, ಈ ಹೊಸ ದರಗಳು 2026-27ನೇ ಆರ್ಥಿಕ ಸಾಲಿಗೆ ಅನ್ವಯವಾಗಲಿವೆ.
ಆಸ್ತಿ ಮಾಲೀಕರು ಈ ಬದಲಾವಣೆಯನ್ನು ಗಮನಿಸಿ, ಪರಿಷ್ಕೃತ ದರದಂತೆ ತೆರಿಗೆ ಪಾವತಿಸಿ ಪುರಸಭೆಯೊಂದಿಗೆ ಸಹಕರಿಸಬೇಕು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್