ದಾವಣಗೆರೆ : ಕಾಂಗ್ರೆಸ್ ಪರ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಚಾರ
ದಾವಣಗೆರೆ, 06 ಏಪ್ರಿಲ್ (ಹಿ.ಸ.) : ಆ್ಯಂಕರ್ : ದಾವಣಗೆರೆಯ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನಲೆಯಲ್ಲಿ ಕುಕ್ಕವಾಡ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದಿಂದ ತೀವ್ರ ಪ್ರಚಾರ ಕಾರ್ಯ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮ
ಹೆಬ್ಬಾಳಕರ್


ದಾವಣಗೆರೆ, 06 ಏಪ್ರಿಲ್ (ಹಿ.ಸ.) :

ಆ್ಯಂಕರ್ : ದಾವಣಗೆರೆಯ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನಲೆಯಲ್ಲಿ ಕುಕ್ಕವಾಡ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದಿಂದ ತೀವ್ರ ಪ್ರಚಾರ ಕಾರ್ಯ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಮಲ್ಲಿಕಾರ್ಜುನ ಪರ ಮತದಾರರಲ್ಲಿ ಬೆಂಬಲ ಕೋರಿದರು. ಅಭಿವೃದ್ಧಿ, ಜನಪರ ಆಡಳಿತ ಹಾಗೂ ಸರ್ಕಾರದ ಭರವಸೆಗಳನ್ನು ಜನರಿಗೆ ತಲುಪಿಸುವುದೇ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಪ್ರಚಾರದ ವೇಳೆ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಅಭಿವೃದ್ಧಿ ಕಾರ್ಯಗಳು, ಕಾಂಗ್ರೆಸ್ ಪಕ್ಷದ ಸಾಧನೆಗಳು ಹಾಗೂ ರಾಜ್ಯ ಸರ್ಕಾರದ ಜನಪರ ‘ಪಂಚ ಗ್ಯಾರಂಟಿ’ ಯೋಜನೆಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಲಾಯಿತು. ಜನರ ವಿಶ್ವಾಸವನ್ನು ಗಳಿಸಿ, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಡಿ. ಮಲ್ಲೇಶಪ್ಪ, ಕೆ.ಜಿ. ಮಹೇಶ್ವರಪ್ಪ, ಡಿ.ಬಿ. ಶಂಕರ, ಕೆ.ಸಿ. ಶಿವಕುಮಾರ್, ತಿಪ್ಪೇಶ್, ಅವರಗೆರೆ ರಾಜು ಸೇರಿದಂತೆ ಪಕ್ಷದ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande