
ಬೆಂಗಳೂರು, 06 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, “ಲವ್ ಜಿಹಾದ್ ಎನ್ನುವ ಪಿಡುಗನ್ನು ಸರ್ಕಾರ ಪರೋಕ್ಷವಾಗಿ ಬೆಂಬಲಿಸುತ್ತಿದೆ” ಎಂದು ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಪ್ರತಿಕ್ರಿಯಿಸಿರುವ ಅವರು, ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತಬ್ಯಾಂಕ್ ರಾಜಕಾರಣಕ್ಕಾಗಿ ಇಂತಹ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವುದಿಲ್ಲ ಎಂದು ಟೀಕಿಸಿದ್ದಾರೆ.
“ಹಿಂದೂ ಸಮಾಜದ ಯುವತಿಯರು ಬಲಿಯಾಗುತ್ತಿದ್ದರೂ ಆರೋಪಿಗಳಿಗೆ ರಕ್ಷಣೆ ನೀಡಲಾಗುತ್ತಿದೆ” ಎಂಬ ಆರೋಪವನ್ನೂ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ ಪ್ರಶ್ನಿಸಿದ ಅಶೋಕ್, “ಪೊಲೀಸರಿಗೆ ಮತಾಂಧರನ್ನು ಮುಟ್ಟಬೇಡಿ ಎಂಬ ಸೂಚನೆ ನೀಡಿದ್ದೀರಾ?” ಎಂದು ಪ್ರಶ್ನಿಸಿದ್ದಾರೆ.
“ಜಿಹಾದಿ ಮತಾಂಧರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲದಿದ್ದರೆ ರಾಜೀನಾಮೆ ನೀಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa