ಐದು ರಾಜ್ಯಗಳ ಚುನಾವಣೆ : ಬಿಜೆಪಿ ಬಿರುಸಿನ ಪ್ರಚಾರ ; ಅಸ್ಸಾಂನಲ್ಲಿ ಮೋದಿ
ನವದೆಹಲಿ, 06 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶದ ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಪ್ರಚಾರವನ್ನು ಮತ್ತಷ್ಟು ವೇಗಗೊಳಿಸಿದೆ. ನರೇಂದ್ರ ಮೋದಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಐದು ರಾಜ್ಯಗಳಲ್ಲಿ ಸತತ ಸಭೆಗಳಲ್ಲಿ ಭಾಗವಹಿಸ
Pm program


ನವದೆಹಲಿ, 06 ಏಪ್ರಿಲ್ (ಹಿ.ಸ.) :

ಆ್ಯಂಕರ್ : ದೇಶದ ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಪ್ರಚಾರವನ್ನು ಮತ್ತಷ್ಟು ವೇಗಗೊಳಿಸಿದೆ. ನರೇಂದ್ರ ಮೋದಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಐದು ರಾಜ್ಯಗಳಲ್ಲಿ ಸತತ ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ.

ಇಂದು ಪ್ರಧಾನಿ ಮೋದಿ ಅಸ್ಸಾಂನಲ್ಲಿ ಮೂರೂ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಬಾರ್ಪೇಟಾ, ಮಧ್ಯಾಹ್ನ 1:15ಕ್ಕೆ ಹೊಜೈ ಮತ್ತು ಸಂಜೆ 4 ಗಂಟೆಗೆ ದಿಬ್ರುಗಢ ನಲ್ಲಿ ಸಭೆಗಳು ನಡೆಯಲಿವೆ. ಇದೇ ವೇಳೆ, ಪಕ್ಷದ ಮಾಜಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕೂಡ ಅಸ್ಸಾಂನಲ್ಲಿ ಪ್ರಚಾರ ನಡೆಸಲಿದ್ದು, ಮಧ್ಯಾಹ್ನ 12ಕ್ಕೆ ಟಿನ್ಸುಕಿಯಾ ಹಾಗೂ 2ಕ್ಕೆ ಲಖಿಂಪುರ ನಲ್ಲಿ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಇನ್ನೊಂದೆಡೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೇರಳ ಮತ್ತು ಪುದುಚೇರಿಯಲ್ಲಿ ಪ್ರಚಾರ ಕಾರ್ಯಗಳಲ್ಲಿ ತೊಡಗಲಿದ್ದಾರೆ. ಬಿಜೆಪಿ ಸಂಸ್ಥಾಪನಾ ದಿನದ ಅಂಗವಾಗಿ ಅವರು ಬೆಳಿಗ್ಗೆ ತಿರುವನಂತಪುರಂ ನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಅವರು ಪುದುಚೇರಿಗೆ ತೆರಳಿ ರೋಡ್ ಶೋ ನಡೆಸಲಿದ್ದಾರೆ.

ಚುನಾವಣೆ ವೇಳಾಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ 294 ಸ್ಥಾನಗಳಿಗೆ ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ತಮಿಳುನಾಡು (234), ಕೇರಳ (140), ಅಸ್ಸಾಂ (126) ಮತ್ತು ಪುದುಚೇರಿ (30) ಪ್ರದೇಶಗಳಲ್ಲಿ ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಎಲ್ಲಾ ರಾಜ್ಯಗಳ ಫಲಿತಾಂಶಗಳನ್ನು ಮೇ 4ರಂದು ಪ್ರಕಟಿಸಲಾಗುವುದು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande