ದಾವಣಗೆರೆ : ಮತದಾನ ಜಾಗೃತಿಗಾಗಿ ‘ಸ್ವೀಪ್’ ಜಾಥಾ
ದಾವಣಗೆರೆ, 06 ಏಪ್ರಿಲ್ (ಹಿ.ಸ.) : ಆ್ಯಂಕರ್ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಜಿಲ್ಲಾಡಳಿತವು ವಿಶೇಷ ‘ಸ್ವೀಪ್’ (SVEEP) ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಏಪ್ರಿಲ್ 9 ರಂದು ನಡೆಯಲಿರುವ ಮತದಾನದಲ್ಲಿ ಪ್ರತಿಯೊಬ್ಬರೂ ಭ
Awareness


ದಾವಣಗೆರೆ, 06 ಏಪ್ರಿಲ್ (ಹಿ.ಸ.) :

ಆ್ಯಂಕರ್ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಜಿಲ್ಲಾಡಳಿತವು ವಿಶೇಷ ‘ಸ್ವೀಪ್’ (SVEEP) ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಏಪ್ರಿಲ್ 9 ರಂದು ನಡೆಯಲಿರುವ ಮತದಾನದಲ್ಲಿ ಪ್ರತಿಯೊಬ್ಬರೂ ಭಾಗವಹಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಮನವಿ ಮಾಡಿದರು.

ನಗರದ ದೇವರಾಜ ಅರಸು ಬಡಾವಣೆಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ವಾಕ್ಥಾನ್ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದ ಬಲವರ್ಧನೆಗೆ ಮತದಾನ ಮಹತ್ವದ ಸಾಧನವಾಗಿದ್ದು, ಪ್ರತಿಯೊಬ್ಬ ನಾಗರಿಕರೂ ತಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸಬೇಕು ಎಂದು ಅವರು ಹೇಳಿದರು. “ಏಪ್ರಿಲ್ 9ರಂದು ಬೆಳಿಗ್ಗೆಯಿಂದಲೇ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿ” ಎಂದು ಕರೆ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಮತದಾನದ ಪ್ರಮಾಣ ಉತ್ಸಾಹಕರವಾಗಿದ್ದರೂ, ನಗರ ಪ್ರದೇಶಗಳಲ್ಲಿ ವಿದ್ಯಾವಂತರ ಹಾಗೂ ಯುವಕರ ಭಾಗವಹಿಸುವಿಕೆ ಕಡಿಮೆಯಿರುವುದು ಆತಂಕಕಾರಿ. ಈ ಬಾರಿ ನಗರವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವ ಮೂಲಕ ಜಿಲ್ಲೆಯ ಒಟ್ಟಾರೆ ಮತದಾನ ಪ್ರಮಾಣ ಹೆಚ್ಚಿಸಬೇಕೆಂದು ತಿಳಿಸಿದರು.

ವೈಯಕ್ತಿಕ ಹಾಗೂ ವೃತ್ತಿಪರ ವ್ಯಸ್ತತೆಯ ನಡುವೆಯೂ ಮತದಾನಕ್ಕೆ ಆದ್ಯತೆ ನೀಡಬೇಕು. “ನಿಮ್ಮ ಒಂದು ಮತ ದೇಶದ ಭವಿಷ್ಯವನ್ನು ನಿರ್ಧರಿಸಬಲ್ಲದು” ಎಂದು ಅವರು ಒತ್ತಿಹೇಳಿದರು.

ದೇವರಾಜ ಅರಸು ಬಡಾವಣೆಯ ಮೈದಾನದಿಂದ ಹೊಂಡದ ಸರ್ಕಲ್ ಮೂಲಕ ಚನ್ನಬಸಪ್ಪ ಅಂಗಡಿ ಮಾರ್ಗವಾಗಿ ಎಕ್ಸ್ ಮುನ್ಸಿಪಲ್ ಶಾಲೆಯವರೆಗೆ ಜಾಗೃತಿ ಜಾಥಾ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಮ್ಮುಖಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ದೇವೇಂದ್ರಪ್ಪ, ಜಿಲ್ಲಾ ಪಂಚಾಯಿತಿ ಪಿಡಿ ರೇಷ್ಮಾ ಕೌಸರ್, ಸಿಪಿಒ ಮಲ್ಲಾ ನಾಯಕ್, ತೋಟಗಾರಿಕಾ ಜಂಟಿ ನಿರ್ದೇಶಕ ರಾಘವೇಂದ್ರ, ತಹಶೀಲ್ದಾರ್ ರಾಮ್ ಬೋವಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಯೋಗೇಂದ್ರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande