ದಾವಣಗೆರೆ : ಯರಗುಂಟಿಯಲ್ಲಿ ಬಿಜೆಪಿ ಪರ ರವಿಕುಮಾರ ಮತಯಾಚನೆ
ದಾವಣಗೆರೆ, 07 ಏಪ್ರಿಲ್ (ಹಿ.ಸ.) : ಆ್ಯಂಕರ್ : ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಯರಗುಂಟಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಪರವಾಗಿ ಪರಿಷತ್ ಸದಸ್ಯ ರವಿಕುಮಾರ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಗ್ರಾಮದಲ್ಲಿ ಮನೆಮನೆಗೆ ತೆರಳಿ ಮತದಾರರನ
Campaign


ದಾವಣಗೆರೆ, 07 ಏಪ್ರಿಲ್ (ಹಿ.ಸ.) :

ಆ್ಯಂಕರ್ : ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಯರಗುಂಟಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಪರವಾಗಿ ಪರಿಷತ್ ಸದಸ್ಯ ರವಿಕುಮಾರ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಗ್ರಾಮದಲ್ಲಿ ಮನೆಮನೆಗೆ ತೆರಳಿ ಮತದಾರರನ್ನು ಭೇಟಿ ಮಾಡಿದ ಅವರು, ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ಸ್ಥಳೀಯ ಸಮಸ್ಯೆಗಳು, ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿ, ಪಕ್ಷದ ಯೋಜನೆಗಳು ಮತ್ತು ಭವಿಷ್ಯದ ದೃಷ್ಟಿಕೋನವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಪ್ರಮುಖ ಮುಖಂಡರು, ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande