ಏ. 9 ರಂದು ಹಿರೇಬೊಮ್ಮನಾಳ - ವಿದ್ಯುತ್ ವ್ಯತ್ಯಯ
ಕೊಪ್ಪಳ, 07 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜೆಸ್ಕಾಂ ಕೊಪ್ಪಳ ಉಪ ವಿಭಾಗ ವ್ಯಾಪ್ತಿಯ ವ್ಯಾಪ್ತಿಯಲ್ಲಿ 33ಕೆವಿ ಹಿರೇಬೊಮ್ಮನಾಳ ಉಪಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕೆಲಸದ ನಿಮಿತ್ತ ಕೆಲಸದ ಏಪ್ರಿಲ್ 9 ರಂದು ಬೆಳಿಗ್ಗೆ 10 ರಿಂದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ
ಏ. 9 ರಂದು ಹಿರೇಬೊಮ್ಮನಾಳ - ವಿದ್ಯುತ್ ವ್ಯತ್ಯಯ


ಕೊಪ್ಪಳ, 07 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜೆಸ್ಕಾಂ ಕೊಪ್ಪಳ ಉಪ ವಿಭಾಗ ವ್ಯಾಪ್ತಿಯ ವ್ಯಾಪ್ತಿಯಲ್ಲಿ 33ಕೆವಿ ಹಿರೇಬೊಮ್ಮನಾಳ ಉಪಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕೆಲಸದ ನಿಮಿತ್ತ ಕೆಲಸದ ಏಪ್ರಿಲ್ 9 ರಂದು ಬೆಳಿಗ್ಗೆ 10 ರಿಂದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

33ಕೆವಿ ಹಿರೇಬೊಮ್ಮನಾಳ ಉಪಕೇಂದ್ರದ ಫೀಡರ್ಗಳಾದ ಎಫ್-1 ಹಿರೆಬೊಮ್ಮನಾಳ ಐಪಿ, ಎಫ್-3 ಚಿಕ್ಕಬೊಮ್ಮನಾಳ ಐಪಿ, ಎಫ್-4 ಚಳ್ಳಾರಿ ಐಪಿ, ಎಫ್-2 ಗಂಗನಾಳ ಎನ್.ಜೆ.ವೈ. ಫೀಡರ್ಗಳ ವ್ಯಾಪ್ತಿಗೆ ಒಳಪಡುವ ಇರಕಲ್ಗಡಾ ಕಾರ್ಯ ಮತ್ತು ಪಾಲನಾ ಶಾಖೆಯ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು.

ಕಾಮಗಾರಿಯು ನಿಗದಿತ ಅವಧಿಗಿಂತ ಮೊದಲು ಪೂರ್ಣಗೊಂಡಲ್ಲಿ ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು. ಈ ಅವಧಿಯಲ್ಲಿ ಸಾರ್ವಜನಿಕರು ಯಾವುದೇ ವಿಧದ ವಿದ್ಯುತ್ ದುರಸ್ತಿ ಅಥವಾ ಸಂಬಂಧಿತ ಕೆಲಸಗಳನ್ನು ಕೈಗೊಳ್ಳಬಾರದೆಂದು ಸೂಚಿಸಲಾಗಿದೆ.

ಒಂದು ವೇಳೆ ವಿದ್ಯುತ್ ಅಪಘಾತ ಸಂಭವಿಸಿದಲ್ಲಿ ಕಂಪನಿಯು ಜವಾಬ್ದಾರರಾಗಿರುವುದಿಲ್ಲ ಎಂದು ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande