ಏ. 9ರಂದು ಟಣಕನಕಲ್ನಲ್ಲಿ ಅಲ್ಪಸಂಖ್ಯಾತರ ಜಾಗೃತಿ
ಕೊಪ್ಪಳ, 07 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು. ನಿಸಾರ್ ಅಹಮದ್ ಅವರ ಅಧ್ಯಕ್ಷತೆಯಲ್ಲಿ ಅಲ್ಪಸಂಖ್ಯಾತರ ಕುಂದು ಕೊರತೆ, ಅಲ್ಪಸಂಖ್ಯಾತ ಮಹಿಳೆಯರ ಮತ್ತು ಸ್ಥಳೀಯ ಮಹಿಳಾ ಅಧಿಕಾರೇತರ ಸಂಸ್ಥೆಗಳಿಗೆ ಸಾಕ್ಷರತೆಯನ್ನು ಪ್ರೇರೇಪಿಸಲು ಜಾಗೃತಿ ಕಾರ್ಯ
ಏ. 9ರಂದು ಟಣಕನಕಲ್ನಲ್ಲಿ ಅಲ್ಪಸಂಖ್ಯಾತರ ಜಾಗೃತಿ


ಕೊಪ್ಪಳ, 07 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು. ನಿಸಾರ್ ಅಹಮದ್ ಅವರ ಅಧ್ಯಕ್ಷತೆಯಲ್ಲಿ ಅಲ್ಪಸಂಖ್ಯಾತರ ಕುಂದು ಕೊರತೆ, ಅಲ್ಪಸಂಖ್ಯಾತ ಮಹಿಳೆಯರ ಮತ್ತು ಸ್ಥಳೀಯ ಮಹಿಳಾ ಅಧಿಕಾರೇತರ ಸಂಸ್ಥೆಗಳಿಗೆ ಸಾಕ್ಷರತೆಯನ್ನು ಪ್ರೇರೇಪಿಸಲು ಜಾಗೃತಿ ಕಾರ್ಯಕ್ರಮವನ್ನು ಏಪ್ರಿಲ್ 9 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳ ತಾಲ್ಲೂಕಿನ ಟಣಕನಕಲ್ ಗ್ರಾಮದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಯೋಜಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯದ ಚುನಾಯಿತ ಪ್ರತಿನಿಧಿಗಳು, ಸ್ಥಳಿಯ ಅಧೀಕಾರೇತರ ಮುಖಂಡರು, ಮಹಿಳಾ ಚುನಾಯಿತ ಪ್ರತಿನಿಧಿಗಳು, ಮಹಿಳಾ ಅಧಿಕಾರೇತರ ಸಂಘ ಸಂಸ್ಥೆಯವರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande