
ವಿಜಯಪುರ, 07 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಮತಕ್ಷೇತ್ರದ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆ ದೇವರ ಹಿಪ್ಪರಗಿ ಪ್ರವಾಸಿ ಮಂದಿರದಲ್ಲಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪ್ರಥಮ ಆದ್ಯತೆ ನೀಡಲಾಗಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಶಾಸಕ ರಾಜುಗೌಡ ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಾಮಗಳಲ್ಲಿ ಇರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತಕ್ಷಣ ಸಣ್ಣಪುಟ್ಟ ದುರಸ್ತಿ ಮಾಡಿ ಕಾರ್ಯನಿರ್ವಹಣೆಯಲ್ಲಿ ಇರಿಸಲು ತಿಳಿಸಲಾಯಿತು. ಜೊತೆಗೆ ಬೋರವೆಲ್ಗಳು, ಹ್ಯಾಂಡ್ ಪಂಪ್ಗಳು ಹಾಗೂ ಬಾವಿಗಳ ಕುಡಿಯುವ ನೀರಿನ ವ್ಯವಸ್ಥೆಗಳನ್ನು ಸರಿಪಡಿಸಿ ನಿರಂತರ ನೀರಿನ ಸರಬರಾಜು ಒದಗಿಸುವಂತೆ ಪಿಡಿಒ ಮತ್ತು ಸಂಬಂಧಿತ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.
15ನೇ ಹಣಕಾಸು ಯೋಜನೆಯಡಿ ಹ್ಯಾಂಡ್ ಪಂಪ್ಗಳ ರಿಪೇರಿ ಕಾರ್ಯಗಳನ್ನು ಶೀಘ್ರ ಪೂರ್ಣಗೊಳಿಸಲು ಸೂಚಿಸಲಾಯಿತು.
ಸಭೆಯಲ್ಲಿ ಪಶು ಆಸ್ಪತ್ರೆಗಳಲ್ಲಿನ ಸಿಬ್ಬಂದಿ ಕೊರತೆ ಕುರಿತು ಮಾಹಿತಿ ಪಡೆದುಕೊಳ್ಳಲಾಗಿದ್ದು, ಬಾಯಿ ಹುಣ್ಣು ಕಾಯಿಲೆಗೆ ಲಸಿಕೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.
ದನಗಳ ಮರಣದ ನಂತರ ನೀಡಬೇಕಾದ ಪರಿಹಾರ ಒಂದು ವರ್ಷವಾದರೂ ಬಾಕಿ ಉಳಿದಿರುವುದನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಲು ಸೂಚಿಸಲಾಯಿತು. ತಾಲೂಕು ಮಟ್ಟದ ಅಧಿಕಾರಿಗಳು ಸಭೆಗೆ ಗೈರುಹಾಜರಾಗಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಮುಂದುವರಿದರೆ ಸಸ್ಪೆನ್ಷನ್ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.
ಹುಣಶ್ಯಾಳ ಗ್ರಾಮದಲ್ಲಿ ನಿರಂತರ ಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ತಕ್ಷಣ ಕಲೆಕ್ಷನ್ ನೀಡುವಂತೆ ಸೂಚನೆ ನೀಡಲಾಯಿತು. ಜೊತೆಗೆ ಜೆಜೆಎಂ (ಜಲ್ ಜೀವನ್ ಮಿಷನ್) ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ತಹಸೀಲ್ದಾರ್, ಇಓ, ಪಿಡಿಒ, ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳು ಹಾಗೂ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande