
ನವದೆಹಲಿ, 07 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಶ್ವ ಆರೋಗ್ಯ ದಿನ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಆರೋಗ್ಯ ಸೇವಾ ಕಾರ್ಯಕರ್ತರು ಹಾಗೂ ಸಮಾಜದ ಯೋಗಕ್ಷೇಮಕ್ಕಾಗಿ ಶ್ರಮಿಸುತ್ತಿರುವ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.
ಎಕ್ಸ ಖಾತೆಯಲ್ಲಿ ಬಿಡುಗಡೆ ಮಾಡಿದ ಸಂದೇಶದಲ್ಲಿ, ಇತರರ ಸೇವೆಗಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡು, ಆರೋಗ್ಯಕರ ಸಮಾಜ ಮತ್ತು ಆರೋಗ್ಯಕರ ಭೂಮಿಗಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬರ ಪಾತ್ರವನ್ನು ಅವರು ಪ್ರಶಂಸಿಸಿದ್ದಾರೆ. ಜೊತೆಗೆ, ಉತ್ತಮ ಆರೋಗ್ಯ ವ್ಯವಸ್ಥೆ ನಿರ್ಮಾಣದತ್ತ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.
ಪ್ರಧಾನಿ ಅವರು, “ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ನಾವು ಒಟ್ಟಾಗಿ ಕಾರ್ಯನಿರ್ವಹಿಸಬೇಕು. ಆರೋಗ್ಯ ವ್ಯವಸ್ಥೆಗಳನ್ನು ಮತ್ತಷ್ಟು ಬಲಪಡಿಸಿ, ಪ್ರತಿಯೊಬ್ಬ ನಾಗರಿಕರ ಯೋಗಕ್ಷೇಮಕ್ಕೆ ಆದ್ಯತೆ ನೀಡುವುದು ನಮ್ಮ ಗುರಿಯಾಗಿದೆ” ಎಂದು ಹೇಳಿದ್ದಾರೆ.
ದೇಶದಾದ್ಯಂತ ವೈದ್ಯರು, ನರ್ಸ್ಗಳು, ಆರೋಗ್ಯ ಸಿಬ್ಬಂದಿ ಹಾಗೂ ಸ್ವಯಂಸೇವಕರು ಸಲ್ಲಿಸುತ್ತಿರುವ ಸೇವೆಯನ್ನು ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಸ್ಮರಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa