ಬೆಂಗಳೂರು ಪಶ್ಚಿಮ ನಗರ ಪಾಲಿಕೆಯಿಂದ ಮಳೆಗಾಲ ಮುಂಜಾಗ್ರತೆ ಸಭೆ
ಬೆಂಗಳೂರು, 07 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ. ರವರು ಇಂದು ಪಾಲಿಕೆ ವ್ಯಾಪ್ತಿಯಲ್ಲಿ ಮುಂಬರುವ ಮಳೆಗಾಲದ ಮುಂಜಾಗ್ರತೆ ಸಿದ್ಧತೆಗಳು ಹಾಗೂ ಕಾಮಗಾರಿ ಕೆಲಸಗಳ ಪ್ರಗತಿ ಕುರಿತು ಕಾಮಗಾರಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸ
Meeting


ಬೆಂಗಳೂರು, 07 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ. ರವರು ಇಂದು ಪಾಲಿಕೆ ವ್ಯಾಪ್ತಿಯಲ್ಲಿ ಮುಂಬರುವ ಮಳೆಗಾಲದ ಮುಂಜಾಗ್ರತೆ ಸಿದ್ಧತೆಗಳು ಹಾಗೂ ಕಾಮಗಾರಿ ಕೆಲಸಗಳ ಪ್ರಗತಿ ಕುರಿತು ಕಾಮಗಾರಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಆಯುಕ್ತರು, ಮುಂಬರುವ ಮಳೆಗಾಲದ ಸಂದರ್ಭದಲ್ಲಿ ವಿಭಾಗ ಮಟ್ಟದಲ್ಲಿ ಎಲ್ಲಾ ಅಭಿಯಂತರರು ಯಾವುದೇ ಲೋಪವಿಲ್ಲದಂತೆ ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು. ಜೊತೆಗೆ ಮಳೆ ನೀರು ನಿಲ್ಲದಂತೆ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಭೆಯಲ್ಲಿ ಮುಖ್ಯ ಅಭಿಯಂತರರಾದ ಸ್ವಯಂ ಪ್ರಭ, ಬಸವರಾಜ್ ಕಬಾಡೆ, ಅಧಿಕ್ಷಕ ಅಭಿಯಂತರರು ಉಪಸ್ಥಿತರಿದ್ದರು ಹಾಗೂ ಎಲ್ಲಾ ವಿಭಾಗಗಳ ಕಾರ್ಯಪಾಲಕ ಅಭಿಯಂತರರು ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರರು ವರ್ಚುವಲ್ ಮೂಲಕ ಭಾಗವಹಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande