
ಬಾಗಲಕೋಟೆ, 08 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ 2025–26ನೇ ಸಾಲಿನ ಚಾಲ್ತಿ ಬೇಡಿಕೆಯ ತೆರಿಗೆ ಸಂಗ್ರಹಣೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ ಕುರೇರ ಅವರಿಗೆ ರಾಜ್ಯ ಸರ್ಕಾರದಿಂದ ಪ್ರಶಂಸನಾ ಪತ್ರ ಲಭಿಸಿದೆ.
ಗ್ರಾಮ ಪಂಚಾಯತಿಗಳ ಮೂಲಕ ತೆರಿಗೆ ಸಂಗ್ರಹಣೆಯನ್ನು ಪರಿಣಾಮಕಾರಿಯಾಗಿ ನಡೆಸಿ ಸಂಪೂರ್ಣ ಸಾಧನೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಕ್ಕಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದ್ದಾರೆ.
ಜಿಲ್ಲೆಯಲ್ಲಿ ಗ್ರಾಮ ಪಂಚಾಯತಿಗಳ ಆಡಳಿತವನ್ನು ಸಮರ್ಥವಾಗಿ ನಿರ್ವಹಿಸಿ, ಆದಾಯ ವೃದ್ಧಿಗೆ ಕೈಗೊಂಡ ಕ್ರಮಗಳು ಫಲಿತಾಂಶ ನೀಡಿದ ಹಿನ್ನೆಲೆಯಲ್ಲಿ ಈ ಗೌರವ ದೊರೆತಿದ್ದು, ಜಿಲ್ಲೆಯ ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸಹಕಾರವೂ ಇದಕ್ಕೆ ಕಾರಣವಾಗಿದೆ ಎಂದು ತಿಳಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande