ಉಪಚುನಾವಣೆ : ನವನಗರ ಕಾಲೇಜಿನಿಂದ ಮತಗಟ್ಟೆಗಳಿಗೆ ಮತಯಂತ್ರಗಳ ರವಾನೆ
ಬಾಗಲಕೋಟೆ, 08 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ಸಿದ್ಧತೆಗಳು ವೇಗ ಪಡೆದಿದ್ದು, ನಗರದ ನವನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ವಿವಿಧ ಮತಗಟ್ಟೆಗಳಿಗೆ ಮತಯಂತ್ರಗಳು ಹಾಗೂ ಇತರ ಅಗತ್ಯ ಚುನಾವಣಾ ಸಾಮಗ್ರಿಗಳನ್ನು ಅಧಿ
ಮತ


ಬಾಗಲಕೋಟೆ, 08 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ಸಿದ್ಧತೆಗಳು ವೇಗ ಪಡೆದಿದ್ದು, ನಗರದ ನವನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ವಿವಿಧ ಮತಗಟ್ಟೆಗಳಿಗೆ ಮತಯಂತ್ರಗಳು ಹಾಗೂ ಇತರ ಅಗತ್ಯ ಚುನಾವಣಾ ಸಾಮಗ್ರಿಗಳನ್ನು ಅಧಿಕಾರಿಗಳು ರವಾನೆ ಮಾಡಿದರು.

ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮತದಾನ ಪ್ರಕ್ರಿಯೆ ಸುಗಮವಾಗಿ ನಡೆಯುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮತಯಂತ್ರಗಳು (ಇವಿಎಂ), ನಿಯಂತ್ರಣ ಘಟಕಗಳು, ವಿವಿಪ್ಯಾಟ್ ಯಂತ್ರಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಿಸಿ ಮತಗಟ್ಟೆಗಳಿಗೆ ಕಳುಹಿಸಲಾಯಿತು.

ಮತದಾನ ಕೇಂದ್ರಗಳಿಗೆ ತೆರಳುವ ಮೊದಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಚುನಾವಣಾ ಸಾಮಗ್ರಿಗಳನ್ನು ಪರಿಶೀಲಿಸಿ ಸುರಕ್ಷಿತವಾಗಿ ವಾಹನಗಳಲ್ಲಿ ಸಾಗಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಭದ್ರತೆ ವ್ಯವಸ್ಥೆಯನ್ನೂ ಕಲ್ಪಿಸಲಾಗಿದ್ದು, ಯಾವುದೇ ತೊಂದರೆ ಆಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಉಪಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮತದಾನಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳು ಸಿದ್ಧವಾಗಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ತಮ್ಮ ಮತಗಟ್ಟೆಗಳತ್ತ ತೆರಳಿದರು.

ಚುನಾವಣಾ ಪ್ರಕ್ರಿಯೆ ಶಾಂತಿಯುತವಾಗಿ ಹಾಗೂ ಪಾರದರ್ಶಕವಾಗಿ ನಡೆಯಲು ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ತಿಳಿದು ಬಂದಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande