
ಗದಗ, 08 ಏಪ್ರಿಲ್ (ಹಿ.ಸ.)
ಆ್ಯಂಕರ್: ರಕ್ತದಾನವು ಶ್ರೇಷ್ಠದಾನವಾಗಿದ್ದು ರಕ್ತದಾನ ಮಾಡುವುದರಿಂದ ತುರ್ತು ಸಂದರ್ಭದಲ್ಲಿ, ಅಪಘಾತಗಳು ಸಂಭವಿಸಿದಾಗ, ಶಸ್ತçಚಿಕಿತ್ಸೆ ಸಂದರ್ಭಗಳಲ್ಲಿ ಮತ್ತೊಂದು ಜೀವ ಉಳಿಸಲು ಸಹಾಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ,ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಗದಗ-ಬೆಟಗೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗದಗ, ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಲ್ಲಸಮುದ್ರ-ಗದಗ ಇವರ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರರವರ 135ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಮ್ ರವರ 119ನೇ ಜಯಂತ್ಯೋತ್ಸವ ನಿಮಿತ್ಯ ಬುಧವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರವನ್ನುದ್ದೇಶಿಸಿ ಮಾತನಾಡಿದರು.
ರಕ್ತದಾನ ಮಾಡುವುದರಿಂದ ಮತ್ತೊಂದು ಜೀವ ಉಳಿಸಿದ ತೃಪ್ತಿ ಹಾಗೂ ಮಾನಸಿಕ ಶಾಂತಿ ಇರುತ್ತದೆ. ರಕ್ತದಾನವು ದೇಹದಲ್ಲಿ ಹೊಸ ರಕ್ತಕಣಗಳ ಉತ್ಪಾದನೆಯನ್ನು ಉತ್ತೇಜಿಸುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಎಸ್.ಎನ್.ಬಳ್ಳಾರಿ ಅವರು ಮಾತನಾಡಿ ಸಂವಿಧಾನ ಶಿಲ್ಪಿ, ಮಹಾಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ ಜಯಂತಿ ಪ್ರಯುಕ್ತ ಹಮ್ಮಿಕೊಳ್ಳಲಾಗಿರುವ ಈ ರಕ್ತದಾನ ಶಿಬಿರವು ಮೆಚ್ಚುವಂತಹದ್ದು. ಮತ್ತೊಂದು ಜೀವ ಉಳಿಸುವ ರಕ್ತದಾನ ಮಹಾದಾನವಾಗಿದೆ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ತಹಶೀಲ್ದಾರರಾದ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ನೀಲಗುಂದ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ಶ್ರೀಮತಿ ನಂದಾ ಹಣಬರಟ್ಟಿ, ಡಿಡಿಪಿಐ ಆರ್.ಎಸ್.ಬುರುಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ, ಸೇರಿದಂತೆ ಸಮಾಜದ ಗಣ್ಯರು, ಹಿರಿಯರು, ಮುಖಂಡರು, ವಿವಿಧ ಇಲಾಖೆಯ ಅಧಿಕಾರಿಗಳು, ಹಾಜರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP