
ಧಾರವಾಡ, 08 ಏಪ್ರಿಲ್ (ಹಿ.ಸ.):
ಆ್ಯಂಕರ್:
ಪಂಚಾಯತ್ ಧಾರವಾಡ ಸಭಾ ಭವನದಲ್ಲಿ ಇಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಯೋಜನಾ ಶಾಖೆಯ 2025-26ನೇ ಸಾಲಿನ ಲಿಂಕ್ ಡಾಕ್ಯುಮೆಂಟ್ ಹಾಗೂ ಜಿಲ್ಲಾ ಪಂಚಾಯತ್ ಅನಿರ್ಬಂಧಿತ ಅನುದಾನದಡಿ ಅನುಮೋದಿತ ಕ್ರಿಯಾ ಯೋಜನೆಯ ಕಾಮಗಾರಿಗಳ ಪ್ರಗತಿ ಕುರಿತು ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ವಿವಿಧ ಇಲಾಖೆಗಳ ಕಾಮಗಾರಿಗಳ ಪ್ರಗತಿ, ಎಂಪಿಕ್ ಪ್ರಗತಿ ಹಾಗೂ ಅನುದಾನದ ಬಳಕೆ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಜೊತೆಗೆ 2026-27ನೇ ಸಾಲಿನ ಜಿಲ್ಲಾ ಪಂಚಾಯತ್ ಲಿಂಕ್ ಡಾಕ್ಯುಮೆಂಟ್ ಅನುದಾನದ ಕ್ರಿಯಾ ಯೋಜನೆ ತಯಾರಿಸುವ ಬಗ್ಗೆ ಮಾರ್ಗದರ್ಶನ ನೀಡಲಾಯಿತು.
ಅಧ್ಯಕ್ಷತೆ ವಹಿಸಿದ್ದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಯೋಜನೆಗಳ ಪರಿಣಾಮಕಾರಿ ಜಾರಿಗೆ ಸಮನ್ವಯತೆ ಅಗತ್ಯವಿದ್ದು, ಜನತೆಗೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖ್ಯ ಯೋಜನಾಧಿಕಾರಿಗಳು, ಉಪ ಕಾರ್ಯದರ್ಶಿಗಳು, ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತೋಟಗಾರಿಕೆ ಇಲಾಖೆ, ಪಿಆರ್‌ಡಿ ಇಲಾಖೆ, ಕೆಐಆರ್‌ಡಿಎಲ್, ಅರಣ್ಯ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa