ತುಮಕೂರು: ಜನತಾದರ್ಶನದಲ್ಲಿ 700ಕ್ಕೂ ಹೆಚ್ಚು ಅರ್ಜಿ;ತ್ವರಿತ ಪರಿಹಾರಕ್ಕೆ ಸಚಿವ ಪರಮೇಶ್ವರ ಸೂಚನೆ
ತುಮಕೂರು, 08 ಏಪ್ರಿಲ್ (ಹಿ.ಸ.): ಆ್ಯಂಕರ್: ತುಮಕೂರು ಜಿಲ್ಲಾ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಇಂದು ಗೃಹ ಸಚಿವ ಜಿ. ಪರಮೇಶ್ವರ ನೇತೃತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಭಾರೀ ಸ್ಪಂದನೆ ವ್ಯಕ್ತವಾಯಿತು. ಕಾರ್ಯಕ್ರಮದಲ್ಲಿ 700ಕ್ಕೂ ಹೆಚ್ಚು ಅರ್ಜಿಗಳನ್ನು
Janata Darshan


ತುಮಕೂರು, 08 ಏಪ್ರಿಲ್ (ಹಿ.ಸ.):

ಆ್ಯಂಕರ್:

ತುಮಕೂರು ಜಿಲ್ಲಾ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಇಂದು ಗೃಹ ಸಚಿವ ಜಿ. ಪರಮೇಶ್ವರ ನೇತೃತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಭಾರೀ ಸ್ಪಂದನೆ ವ್ಯಕ್ತವಾಯಿತು. ಕಾರ್ಯಕ್ರಮದಲ್ಲಿ 700ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿ, ಜನರ ಸಮಸ್ಯೆಗಳನ್ನು ಸಚಿವರು ಆಲಿಸಿದರು.

ಸ್ವೀಕರಿಸಿದ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಿ, ನಿಗದಿತ ಅವಧಿಯೊಳಗೆ ತ್ವರಿತವಾಗಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ವಿಶೇಷವಾಗಿ ತಹಶೀಲ್ದಾರ್‌ಗಳ ವಿರುದ್ಧ ಹೆಚ್ಚಿನ ದೂರುಗಳು ಬಂದಿರುವುದನ್ನು ಗಮನಿಸಿ, ಉಪವಿಭಾಗಧಿಕಾರಿಗಳು ಹಾಗೂ ತಹಶೀಲ್ದಾರ್‌ಗಳು ಜನರಿಗೆ ಸ್ಪಂದನಾಶೀಲವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ರೇಷನ್ ಕಾರ್ಡ್‌ನಲ್ಲಿ ಹೆಸರು ಬದಲಾವಣೆ ಮಾಡಲು ಒಂದು ವರ್ಷದಿಂದ ನಾಗರಿಕರು ಅಲೆದಾಡುತ್ತಿರುವ ಪ್ರಕರಣವನ್ನು ಉದಾಹರಿಸಿದ ಸಚಿವರು, ಇಂತಹ ವಿಳಂಬಗಳು ಮರುಕಳಿಸಬಾರದು. ಜನರನ್ನು ಕಚೇರಿಗಳಿಗೆ ಸುತ್ತಾಡಿಸದೆ, ಅವರ ಸಮಸ್ಯೆಗಳನ್ನು ನೇರವಾಗಿ ಮತ್ತು ಶೀಘ್ರವಾಗಿ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಈ ವೇಳೆ ತುಮಕೂರು ನಗರ ಶಾಸಕರಾದ ಜಿ. ಬಿ. ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಗೌಡ, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೆರೆ ಮಹೇಶ್ ಸೇರಿದಂತೆ ವಿವಿಧ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande