
ವಿಜಯಪುರ, 08 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಗ್ರಾಮದಲ್ಲಿರುವ ಕಲ್ಯಾಣಿ ಚಾಲುಕ್ಯರ ಕಾಲಘಟ್ಟದ ಪ್ರಾಚೀನ ಶಿವ ದೇವಾಲಯ ಸ್ಮಾರಕದ ರಕ್ಷಣೆ ಮತ್ತು ಜೀರ್ಣೋದ್ಧಾರಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಜಯಪುರ ಗಾನಯೋಗಿ ಸಂಘದ ಪದಾಧಿಕಾರಿಗಳು ಹಾಗೂ ಹೊರ್ತಿ ಗ್ರಾಮಸ್ಥರು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಶಾಸಕ ಯಶವಂತರಾಯಗೌಡ, ನಮ್ಮ ಹಿರಿಯರು ಕಟ್ಟಿಕೊಟ್ಟ ಇಂತಹ ಐತಿಹಾಸಿಕ ಶಿಲ್ಪಕಲೆ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಮುಂದಿನ ಪೀಳಿಗೆಗೆ ಅದನ್ನು ಉಳಿಸಿ ನೀಡುವುದು ಅತ್ಯಂತ ಮುಖ್ಯ ಎಂದು ಹೇಳಿದರು.
ಮನವಿಗೆ ಸ್ಪಂದಿಸಿ, ಈ ಕುರಿತು ಸಂಬಂಧಪಟ್ಟ ಪುರಾತತ್ವ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ತಕ್ಷಣವೇ ಚರ್ಚೆ ನಡೆಸಿ ದೇವಾಲಯದ ರಕ್ಷಣೆ ಹಾಗೂ ಜೀರ್ಣೋದ್ಧಾರಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande