
ವಿಜಯಪುರ, 08 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಶಾಸಕ ಅಶೋಕ್ ಮನಗೂಳಿ ಅವರ ಗೃಹ ಕಚೇರಿಯಲ್ಲಿ ಕ್ಷೇತ್ರದ ವಿವಿಧ ಭಾಗಗಳಿಂದ ಆಗಮಿಸಿದ ಸಾರ್ವಜನಿಕರನ್ನು ಭೇಟಿ ಮಾಡಿ ಅವರ ಕುಂದುಕೊರತೆಗಳನ್ನು ಆಲಿಸಿದರು.
ದೂರದ ಊರುಗಳಿಂದ ಬಂದ ಹಿರಿಯರು, ರೈತಬಾಂಧವರು ಹಾಗೂ ಯುವಕರು ತಮ್ಮ ಗ್ರಾಮಗಳ ಮೂಲಭೂತ ಸಮಸ್ಯೆಗಳು ಮತ್ತು ವೈಯಕ್ತಿಕ ಅಹವಾಲುಗಳನ್ನು ಈ ಸಂದರ್ಭದಲ್ಲಿ ಮುಂದಿಟ್ಟರು.
ಸಾರ್ವಜನಿಕರ ಮನವಿಗಳನ್ನು ಗಮನದಿಂದ ಆಲಿಸಿದ ಬಳಿಕ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚೆ ನಡೆಸಿ ಸಮಸ್ಯೆಗಳಿಗೆ ಸಾಧ್ಯವಾದಷ್ಟು ಬೇಗ ಪರಿಹಾರ ಒದಗಿಸುವುದಾಗಿ ಭರವಸೆ ನೀಡಲಾಯಿತು.
ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಈ ವೇಳೆ ತಿಳಿಸಲಾಯಿತು.
ಕ್ಷೇತ್ರದ ಅಭಿವೃದ್ಧಿ ಹಾಗೂ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಸದಾ ಸಕ್ರಿಯವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / jyothi deshpande