ಕುಸುಬೆ ಹುಟ್ಟುವಳಿ ಖರೀದಿಗೆ ಬೆಂಬಲ ಬೆಲೆ ನಿಗದಿ
ಗದಗ, 08 ಏಪ್ರಿಲ್ (ಹಿ.ಸ.) ಆ್ಯಂಕರ್:- 2026 ನೇ ಸಾಲಿನ ಹಿಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಹುಟ್ಟುವಳಿಯನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ
ಫೋಟೋ


ಗದಗ, 08 ಏಪ್ರಿಲ್ (ಹಿ.ಸ.)

ಆ್ಯಂಕರ್:- 2026 ನೇ ಸಾಲಿನ ಹಿಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಹುಟ್ಟುವಳಿಯನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಭವನದಲ್ಲಿಂದು 2026 ನೇ ಸಾಲಿನ ಹಿಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕುಸುಬೆ ಹುಟ್ಟುವಳಿ ಖರೀದಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಪ್ರತಿ ರೈತರಿಂದ ಪ್ರತಿ ಎಕರೆಗೆ 05 ಕ್ವಿಂಟಲ್ನಂತೆ ಗರಿಷ್ಟ 20 ಕ್ವಿಂಟಲ್ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಖರೀದಿಸಲು ಹಾಗೂ ಕುಸುಬೆ ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಕುಸುಬೆ ಉತ್ಪನ್ನವನ್ನು ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಸುಧಾ ಆರ್ ಬಂಡಿ ಮಾತನಾಡಿ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೇ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್ಗೆ ರೂ. 6540 ರಂತೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಸದರಿ ಆದೇಶ ಹೊರಡಿಸಿದ ದಿನಾಂಕದಿಂದ ರೈತರ ನೋಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರಗೆ ನಿಗದಿಪಡಿಸಲಾಗಿದೆ. ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಸಹ ಪ್ರಾರಂಭಿಸಿ ಕೇಂದ್ರದಿಂದ ಎನ್.ಸಿ.ಸಿ.ಎಫ್ ಹಾಗೂ ರಾಜ್ಯದಲ್ಲಿ ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ (ಕೆ.ಓ.ಎಫ್) ಬೇಂಗಳೂರು ಸಂಸ್ಥೆಯ ಮೂಲಕ ಖರೀದಿಸಲು ಆದೇಶಿಸಲಾಗಿದೆ ಎಂದು ತಿಳಿಸಿದರು.

ಈ ಕೆಳಕಾಣಿಸಿದ 13 ಸ್ಥಳಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಲಾಯಿತು.

ಗದಗ ತಾಲೂಕು, ಮುಳಗುಂದ ,ಬಳಗಾನೂರ,ಹೊಂಬಳ,

ನರಗುಂದ, ಕಣಕಿಕೊಪ್ಪ ಶಿರಹಟ್ಟಿ, ರಣತೂರ, ಲಕ್ಷ್ಮೇಶ್ವರ, ಶಿಗ್ಲಿ ರೋಣ, ಅಬ್ಬಗೇರಿ,

ಮೆ.ಕಿಸಾನ ಅಬಿವೃದ್ಧಿ ತೋಟಗಾರಿಕೆ ರೈತ ಉತ್ಪಾದಕರ ಕಂಪನಿ ಮಾಡಲಗೇರಿ

ಗಜೇಂದ್ರಗಡ, ಟಿಎಪಿಸಿಎಂಎಸ್ ನರಗಲ್ ನಿಡಗುಂದಿ, ಮೆ.ನರೇಗಲ್ ರೈತ ಸಮೃದ್ದಿ ತೋಟಗಾರಿಕಾ ಉತ್ಪಾದಕರ ಕಂಪನಿ,ನರೆಗಲ್

ಮುಂಡರಗಿ ಬರದೂರ, ಪೇಠಲೂರ

ಸಭೆಯಲ್ಲಿ ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande