ಕಲಕೇರಿ ಠಾಣೆ ಪೊಲೀಸರ ಕಾರ್ಯಾಚರಣೆ ; ₹35.15 ಲಕ್ಷ ಮೌಲ್ಯದ ಜೆಸಿಬಿ, ಬೈಕ್ ವಶ
ವಿಜಯಪುರ, 08 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯ ಕಲಕೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸ್ವತ್ತಿನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಪತ್ತೆ ಹಚ್ಚಿ, ಕಳುವಾಗಿದ್ದ ಆಸ್ತಿಯನ್ನು ವಶಪಡಿಸಿಕೊಂಡು ವಾರಸುದಾರರಿಗೆ ಮರಳಿ ನೀಡಿದ್ದಾರೆ. ಕಲಕೇರಿ ಪೊಲೀಸ್ ಠಾಣಾ ಮೊ.ಸಂ. 07/2026ರಲ್ಲ
ರೈಡ್


ವಿಜಯಪುರ, 08 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯ ಕಲಕೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸ್ವತ್ತಿನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಪತ್ತೆ ಹಚ್ಚಿ, ಕಳುವಾಗಿದ್ದ ಆಸ್ತಿಯನ್ನು ವಶಪಡಿಸಿಕೊಂಡು ವಾರಸುದಾರರಿಗೆ ಮರಳಿ ನೀಡಿದ್ದಾರೆ.

ಕಲಕೇರಿ ಪೊಲೀಸ್ ಠಾಣಾ ಮೊ.ಸಂ. 07/2026ರಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿತರನ್ನು ಪತ್ತೆ ಹಚ್ಚಿ ಬಂಧಿಸಲಾಯಿತು. ಅವರಿಂದ ಸುಮಾರು ₹35,15,000 ಮೌಲ್ಯದ ಜೆಸಿಬಿ ಯಂತ್ರ ಹಾಗೂ ಒಂದು ಮೋಟಾರ್ ಸೈಕಲ್ ಅನ್ನು ಪೊಲೀಸರು ವಶಪಡಿಸಿಕೊಂಡರು.

ನಂತರ ಮಾನ್ಯ ನ್ಯಾಯಾಲಯದ ಆದೇಶದಂತೆ ವಶಪಡಿಸಿಕೊಂಡ ಆಸ್ತಿಯನ್ನು ಕಾನೂನು ಪ್ರಕ್ರಿಯೆ ಅನುಸರಿಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ ಕಲಕೇರಿ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande