ಸಕಾಲ ಐಟಿ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳ , 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಖಾಲಿ ಇರುವ ಒಂದು ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ (ಐಟಿ) ಸಮಾಲೋಚಕರ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲಿಚ್ಛಿಸುವ ಅಭ್ಯರ್ಥಿಗಳು ಬಿಇ, ಬಿ.ಟೆಕ್ ಅಥವಾ ಬಿಸ
ಸಕಾಲ ಐಟಿ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ


ಕೊಪ್ಪಳ , 09 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಖಾಲಿ ಇರುವ ಒಂದು ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ (ಐಟಿ) ಸಮಾಲೋಚಕರ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲಿಚ್ಛಿಸುವ ಅಭ್ಯರ್ಥಿಗಳು ಬಿಇ, ಬಿ.ಟೆಕ್ ಅಥವಾ ಬಿಸಿಎ ಪದವಿಯನ್ನು ಹೊಂದಿರಬೇಕು. ವಿಶೇಷವಾಗಿ ಕಂಪ್ಯೂಟರ್ ಸೈನ್ಸ್, ಇನ್ಫರ್ಮೇಶನ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಟೆಲಿಕಾಂ ವಿಭಾಗಗಳಲ್ಲಿ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕವಾಗಿ ಒಟ್ಟು ರೂ. 27,100 (ಟೇಕ್ ಹೋಮ್ 23,150 + ಎಂಪ್ಲೈ ಪಿಎಫ್ 1,800 + ಎಂಪ್ಲಾಯರ್ ಪಿಎಫ್ 1,950 + ಪ್ರೊಫೆಷ್ನಲ್ ಟ್ಯಾಕ್ಸ್ 200 ಒಳಗೊಂಡಂತೆ) ವೇತನವನ್ನು ಸಕಾಲ ವಿಷನ್ನಿಂದ ನೀಡಲಾಗುತ್ತದೆ.

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರ (ರೆಸ್ಯೂಮ್) ಹಾಗೂ ಲಿಖಿತ ಮನವಿಯನ್ನು ಇದೇ ಏಪ್ರಿಲ್ 17ರೊಳಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಕಾಲ ವಿಭಾಗಕ್ಕೆ ಸಲ್ಲಿಸಬೇಕಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande