
ದಾವಣಗೆರೆ, 09 ಏಪ್ರಿಲ್ (ಹಿ.ಸ.) :
ಆ್ಯಂಕರ್ : ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಸಂದರ್ಭದಲ್ಲಿ ಎಸ್ಡಿಪಿಐ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾದ ಘಟನೆ ನಡೆದಿದೆ.
ನಗರದ ಮೆಹಬೂಬ್ ನಗರದಲ್ಲಿನ ಮಿಲ್ಲತ್ ಕಾಲೋನಿಯ ಮತಗಟ್ಟೆ ಸಮೀಪ ಈ ಘಟನೆ ನಡೆದಿದ್ದು, ತಮ್ಮ ಪಕ್ಷಗಳ ಪರ ಮತ ಹಾಕುವಂತೆ ಜನರಿಗೆ ಮನವಿ ಮಾಡುತ್ತಿದ್ದರೆಂಬ ಆರೋಪದ ಹಿನ್ನೆಲೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. ಬಳಿಕ ಪರಿಸ್ಥಿತಿ ತೀವ್ರಗೊಂಡು, ಕೈಕೈ ಮಿಲಾಯಿಸುವ ಹಂತಕ್ಕೂ ತಲುಪಿತ್ತು.
ಘಟನೆಯ ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಮಧ್ಯಪ್ರವೇಶಿಸಿ, ಎರಡೂ ಗುಂಪುಗಳನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa