ದಾವಣಗೆರೆ ದಕ್ಷಿಣ ಮತಕ್ಷೇತ್ರ ಉಪಚುನಾವಣೆ : ಮತದಾನ ಆರಂಭ
ದಾವಣಗೆರೆ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ದಾವಣಗೆರೆ ದಕ್ಷಿಣ ವಿಧಾನ ಸಭೆ ಮತಕ್ಷೇತ್ರದ ಉಪಚುನಾವಣೆಗೆ ಇಂದು ಬೆಳಿಗ್ಗೆ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಆರಂಭವಾಗಿದೆ. ಮತದಾರರು ಮುಂಜಾನೆದಿಂದಲೇ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಚುನಾವಣಾ ಆಯೋಗವು ಎಲ್ಲ
ದಾವಣಗೆರೆ ದಕ್ಷಿಣ ಮತಕ್ಷೇತ್ರ ಉಪಚುನಾವಣೆ : ಮತದಾನ ಆರಂಭ


ದಾವಣಗೆರೆ, 09 ಏಪ್ರಿಲ್ (ಹಿ.ಸ.) :

ಆ್ಯಂಕರ್ : ದಾವಣಗೆರೆ ದಕ್ಷಿಣ ವಿಧಾನ ಸಭೆ ಮತಕ್ಷೇತ್ರದ ಉಪಚುನಾವಣೆಗೆ ಇಂದು ಬೆಳಿಗ್ಗೆ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಆರಂಭವಾಗಿದೆ. ಮತದಾರರು ಮುಂಜಾನೆದಿಂದಲೇ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುತ್ತಿದ್ದಾರೆ.

ಚುನಾವಣಾ ಆಯೋಗವು ಎಲ್ಲಾ ಮತಗಟ್ಟೆಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿದ್ದು, ಭದ್ರತಾ ದೃಷ್ಟಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಮಹಿಳೆಯರು, ಹಿರಿಯ ನಾಗರಿಕರು ಹಾಗೂ ದಿವ್ಯಾಂಗರಿಗೆ ವಿಶೇಷ ವ್ಯವಸ್ಥೆಗಳು ಮಾಡಲಾಗಿದೆ.

ಕ್ಷೇತ್ರದಲ್ಲಿ ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ನಡುವೆ ಕಠಿಣ ಪೈಪೋಟಿ ಕಂಡುಬರುತ್ತಿದ್ದು, ಮತದಾನ ಪ್ರಮಾಣ ಹೆಚ್ಚಿಸಲು ಅಧಿಕಾರಿಗಳು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಮತದಾನ ಸಂಜೆವರೆಗೆ ಮುಂದುವರೆಯಲಿದೆ.

ಶಾಂತಿಯುತ ಮತದಾನಕ್ಕೆ ಕ್ಷೇತ್ರದಲ್ಲಿ ವ್ಯಾಪಕ ಪೋಲಿಸ್ ಬಂದೊಬಸ್ತ್ ಮಾಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande