ಜಿಲ್ಲಾ ನ್ಯಾಯಾಧೀಶೆ ಕೆ.ಜಿ. ಶಾಂತಿ ಅವರಿಂದ ಸ್ವಯಂ ಗಣತಿ
ಬಳ್ಳಾರಿ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತ ಸರ್ಕಾರದ ಮಹತ್ವದ ಯೋಜನೆಯಾದ ‘ಜನಗಣತಿ'' ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ಆರಂಭಗೊ0ಡಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು ಜಿಲ್ಲಾ ನ್ಯಾಯ
ಜಿಲ್ಲಾ ನ್ಯಾಯಾಧೀಶೆ ಕೆ.ಜಿ. ಶಾಂತಿ ಅವರಿಂದ ಸ್ವಯಂ ಗಣತಿ


ಜಿಲ್ಲಾ ನ್ಯಾಯಾಧೀಶೆ ಕೆ.ಜಿ. ಶಾಂತಿ ಅವರಿಂದ ಸ್ವಯಂ ಗಣತಿ


ಜಿಲ್ಲಾ ನ್ಯಾಯಾಧೀಶೆ ಕೆ.ಜಿ. ಶಾಂತಿ ಅವರಿಂದ ಸ್ವಯಂ ಗಣತಿ


ಬಳ್ಳಾರಿ, 09 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಾರತ ಸರ್ಕಾರದ ಮಹತ್ವದ ಯೋಜನೆಯಾದ ‘ಜನಗಣತಿ' ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ಆರಂಭಗೊ0ಡಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು ಜಿಲ್ಲಾ ನ್ಯಾಯಾಲಯದ ತಮ್ಮ ಕಚೇರಿಯಲ್ಲಿ ‘ಸ್ವಯಂ ಗಣತಿ' ಮಾಡುವ ಮೂಲಕ ಸಾರ್ವಜನಿಕರಿಗೆ ಮಾದರಿಯಾದರು.

ಈ ಬಾರಿಯ ಜನಗಣತಿಯಲ್ಲಿ ಡಿಜಿಟಲ್ ಪದ್ಧತಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ನ್ಯಾಯಾಧೀಶರು ಜನಗಣತಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ತಮ್ಮ ವಿವರಗಳನ್ನು ತಾವೇ ಆನ್ಲೈನ್ನಲ್ಲಿ ದಾಖಲಿಸಿದರು.

ದೇಶದ ಅಭಿವೃದ್ಧಿ ಮತ್ತು ಭವಿಷ್ಯದ ಯೋಜನೆಗಳ ರೂಪಿಸುವಲ್ಲಿ ಜನಗಣತಿಯು ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬ ನಾಗರಿಕರು ಯಾವುದೇ ತಪ್ಪು ಮಾಹಿತಿಯನ್ನು ನೀಡದೆ, ನಿಖರವಾದ ವಿವರಗಳನ್ನು ಒದಗಿಸುವುದು ಕರ್ತವ್ಯವಾಗಿದೆ ಎಂದು ಹೇಳಿದರು.

ಡಿಜಿಟಲ್ ಗಣತಿಯಿಂದ ಸಮಯ ಉಳಿತಾಯವಾಗುವುದಲ್ಲದೆ, ದತ್ತಾಂಶದ ನಿಖರತೆ ಹೆಚ್ಚುತ್ತದೆ. ಸಾರ್ವಜನಿಕರು ಆನ್ಲೈನ್ ಮೂಲಕ ‘ಸ್ವಯಂ ಗಣತಿ' ಮಾಡಿಕೊಳ್ಳಲು ಮುಕ್ತ ಅವಕಾಶವಿದೆ. ಗಣತಿ ಕಾರ್ಯಕ್ಕೆ ಸಾರ್ವಜನಿಕರು ಪೂರ್ಣ ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು.

ಇದೇ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಸಹ ಸ್ವಯಂ ಗಣತಿ' ಪ್ರಕ್ರಿಯೆಯಲ್ಲಿ ಭಾಗವಹಿಸಿ ಮಾಹಿತಿ ನೋಂದಾಯಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande