
ಬಳ್ಳಾರಿ, 09 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ನೂತನವಾಗಿ ‘ಖೇಲೋ ಇಂಡಿಯಾ' ಹಾಕಿ ಕ್ರೀಡಾ ತರಬೇತಿ ಪ್ರಾರಂಭಿಸಲಾಗಿದ್ದು, ಜಿಲ್ಲೆಯ ಯುವಕರಲ್ಲಿ ಕ್ರೀಡಾ ಮನೋಭಾವ ಬೆಳೆಸಲು ಉದ್ದೇಶ ಹೊಂದಲಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ನೋಂದಾಯಿಸಿಕೊಳ್ಳಬಹುದಾಗಿದೆ.
8 ವರ್ಷದಿಂದ 16 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರಿಗಾಗಿ ಈ ಹಾಕಿ ತರಬೇತಿ ನೀಡಲಾಗುತ್ತದೆ. ಆಸಕ್ತ ಕ್ರೀಡಾಪಟುಗಳು ನಿಗದಿತ ನಮೂನೆಯಲ್ಲಿ ತಮ್ಮ ವಿವರಗಳನ್ನು ಭರ್ತಿ ಮಾಡುವ ಮೂಲಕ ತರಬೇತಿಗೆ ಸೇರ್ಪಡೆಗೊಳ್ಳಬಹುದು.
ತರಬೇತಿಗೆ ಸೇರಲು ಇಚ್ಛಿಸುವವರು ಅಥವಾ ಹೆಚ್ಚಿನ ಮಾಹಿತಿಗಾಗಿ ಖೇಲೋ ಇಂಡಿಯಾ ಹಾಕಿ ತರಬೇತುದಾರರಾದ ಜೊಹ್ರಾ ಶಮೀಮ್ (ಮೊ.9845778608) ಗೆ ಸಂಪರ್ಕಿಸಬಹುದಾಗಿದೆ ಅಥವಾ ಕ್ರೀಡಾಸಕ್ತರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಗೆ ಭೇಟಿ ಮಾಡಬಹುದು.
ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಬಳ್ಳಾರಿ ಜಿಲ್ಲೆಯ ಮಕ್ಕಳು ಈ ಅವಕಾಶ ಸದುಪಯೋಗಪಡೆದುಕೊಳ್ಳಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್