
ಕೊಪ್ಪಳ, 09 ಏಪ್ರಿಲ್ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನಾನಾ ಹುದ್ದೆಯ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗೆ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಸಮಾಲೋಚಕ ಗುಣಮಟ್ಟ ಭರವಸೆ, ಜಿಲ್ಲಾ ಆಸ್ಪತ್ರೆ ಗುಣಮಟ್ಟ ವ್ಯವಸ್ಥಾಪಕ ಮತ್ತು ಆಡಳಿತಾತ್ಮಕ ಮತ್ತು ಸಹಾಯಕ (District Consultant Quality Assurance (DCQA), District Hospital Quality Manager (DHQM) & Administrative cum Programme Assistant (ACPA)) ಈ ಮೂರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಅದರಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೂರು ಹುದ್ದೆಗಳಾದ ಡಿಸಿಕ್ಯೂಎ ಹುದ್ದೆಗೆ 47, ಡಿಎಚ್ಕ್ಯೂಎಂ ಹುದ್ದೆಗೆ 53 & ಎಸಿಪಿಎ ಹುದ್ದೆಗೆ 59 ಅರ್ಜಿಗಳ ವಿವರ, ತಿರಸ್ಕøತಗೊಂಡ ಅರ್ಜಿಗಳ ವಿವರ, ಅಂಗೀಕರಿಸಲ್ಪಟ್ಟ ಅರ್ಜಿಗಳ ವಿವರ ಮತ್ತು ತಾತ್ಕಾಲಿಕ ಆಯ್ಕೆಪಟ್ಟಿಯ ವಿವರಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯ ಪ್ರದರ್ಶನಾ ಫಲಕದಲ್ಲಿ ಹಾಗೂ ಕೊಪ್ಪಳ ಜಿಲ್ಲಾ ವೆಬ್ ತಾಣದಲ್ಲಿ ಪ್ರದರ್ಶಿಸಿ ಆಕ್ಷೇಪಣೆಗೆ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳಿಂದ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಏಪ್ರಿಲ್ 10 ರಿಂದ ಏ. 17ರ ಸಾಯಂಕಾಲ 4 ಗಂಟೆಯೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಕೊಪ್ಪಳ. ಇಲ್ಲಿಗೆ ಕಛೇರಿ ಸಮಯದಲ್ಲಿ ಖುದ್ದಾಗಿ ಹಾಜರಾಗಿ ಆಕ್ಷೇಪಣೆಗಳನ್ನು ಸಲ್ಲಿಸಬೇಕು. ನಂತರ ಬಂದಂತಹ ಆಕ್ಷೇಪಣೆಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲವೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಉಪಾಧ್ಯಕ್ಷರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್