ಯಲಬುರ್ಗಾ : ಫಸಲ್ ಭೀಮಾದಡಿ ತಿರಸ್ಕೃತ ಪ್ರಸ್ತಾವನೆಗೆ ಆಕ್ಷೇಪಣೆಗಾಗಿ ಅವಕಾಶ
ತಿರಸ್ಕ್ರತ
ಯಲಬುರ್ಗಾ : ಫಸಲ್ ಭೀಮಾದಡಿ ತಿರಸ್ಕೃತ ಪ್ರಸ್ತಾವನೆಗೆ ಆಕ್ಷೇಪಣೆಗಾಗಿ ಅವಕಾಶ


ಕೊಪ್ಪಳ, 09 ಏಪ್ರಿಲ್ (ಹಿ.ಸ.) :

ಆ್ಯಂಕರ್ : 2024-25 ನೇ ಸಾಲಿನ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಫಸಲ್ ಭೀಮಾ(ವಿಮಾ) ಯೋಜನೆಯಡಿಯಲ್ಲಿ ಬೆಳೆ ಸಮಿಕ್ಷೆಯೊಂದಿಗೆ ಹೋಂದಾಣಿಕೆಯಾಗದೆ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಯಲಬುರ್ಗಾ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಲ್ಲಿ 2024-25ನೇ ಸಾಲಿನಲ್ಲಿ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮುಗಳಲ್ಲಿ ವಿವಿಧ ಬೆಳೆಗಳಿಗೆ ವಿಮೆ ಮಾಡಿಸಿ, ಪರಿಹಾರ ಲಭಿಸದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಕೃಷಿ ಇಲಾಖೆ ಅವಕಾಶ ನೀಡಿದೆ.

ಬೆಳೆ ಸಮೀಕ್ಷೆಯ ಫೋಟೋಗಳು ಮತ್ತು ವಿಮೆ ಮಾಡಿಸಿದ ಬೆಳೆಗಳ ನಡುವೆ ವ್ಯತ್ಯಾಸ ಕಂಡುಬಂದ ಹಿನ್ನಲೆ ಕೆಲವು ಅರ್ಜಿಗಳನ್ನು ವಿಮಾ ಸಂಸ್ಥೆ ತಿರಸ್ಕರಿಸಿದೆ. ಇಂತಹ ತಿರಸ್ಕೃತಗೊಂಡ ಅರ್ಜಿಗಳ ಪಟ್ಟಿಯನ್ನು ಆಯಾ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ ಮತ್ತು ಗ್ರಾಮ ಪಂಚಾಯತಿಗಳಲ್ಲಿ ಪ್ರಕಟಿಸಿದ್ದು, ಯಾವ ರೈತರಿಗೆ ಇಲ್ಲಿಯವರೆಗೆ ವಿಮೆ ಪರಿಹಾರ ಬಂದಿಲ್ಲವೊ ಅವರು ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪಟ್ಟಿಯನ್ನು ಪರಿಶೀಲಿಸಬೇಕು.

ತಮ್ಮ ಹೆಸರು ತಿರಸ್ಕøತ ಪಟ್ಟಿಯಲ್ಲಿದ್ದರೆ, 2024-25ರ ಮುಂಗಾರು, ಹಿಂಗಾರು, ಹಾಗೂ ಬೇಸಿಗೆ ಹಂಗಾಮಿನ ಪಹಣಿ (ಇದರಲ್ಲಿ ವಿಮೆ ಮಾಡಿಸಿದ ಬೆಳೆ ನಮೂದಾಗಿರಬೇಕು), ಬೆಂಬಲ ಬೆಲೆ ಯೋಜನಯಲ್ಲಿ ಪ್ರಯೋಜನೆ ಪಡೆದಿರುವ ಬಗ್ಗೆ ರಸೀದಿ, ಅಥವಾ ಎಪಿಎಂಸಿ ಮಾರುಕಟ್ಟೆಗೆ ಉತ್ಪನ್ನಗಳನ್ನು ಮಾರಾಟ ಮಾಡಿದ ರಸೀದಿಗಳೊಂದಿಗೆ ಮನವಿ ಸಲ್ಲಿಸಬಹುದು.

ಆಕ್ಷೇಪಣೆ ಸಲ್ಲಿಸಲು ಏಪ್ರೀಲ್ 25 ಕೊನೆಯ ದಿನವಾಗಿದ್ದು, ಸಲ್ಲಿಕೆಯಾದ ಮನವಿಗಳನ್ನು ತಾಲೂಕು ಮಟ್ಟದಲ್ಲಿ ತಹಸೀಲ್ದಾರರ ಅಧ್ಯಕ್ಷತೆಯ ಸಮಿತಿಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಯಲಬುರ್ಗಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande