ಕೊಪ್ಪಳ : ಫಸಲ್ ಭೀಮಾ ಯೋಜನೆಯ ತಿರಸ್ಕ್ರತ ಪ್ರಸ್ತಾವನೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
ಕೊಪ್ಪಳ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : 2024-25 ನೇ ಸಾಲಿನ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಫಸಲ್ ಭೀಮಾ(ವಿಮಾ) ಯೋಜನೆಯಡಿಯಲ್ಲಿ ಬೆಳೆ ಸಮಿಕ್ಷೆಯೊಂದಿಗೆ ಹೋಂದಾಣಿಕೆಯಾಗದೆ ತಿರಸ್ಕ್ರತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೊಪ್ಪಳದ ಸಹಾಯಕ ಕ
ಕೊಪ್ಪಳ : ಫಸಲ್ ಭೀಮಾ ಯೋಜನೆಯ ತಿರಸ್ಕ್ರತ ಪ್ರಸ್ತಾವನೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ


ಕೊಪ್ಪಳ, 09 ಏಪ್ರಿಲ್ (ಹಿ.ಸ.) :

ಆ್ಯಂಕರ್ : 2024-25 ನೇ ಸಾಲಿನ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಫಸಲ್ ಭೀಮಾ(ವಿಮಾ) ಯೋಜನೆಯಡಿಯಲ್ಲಿ ಬೆಳೆ ಸಮಿಕ್ಷೆಯೊಂದಿಗೆ ಹೋಂದಾಣಿಕೆಯಾಗದೆ ತಿರಸ್ಕ್ರತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೊಪ್ಪಳದ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಲ್ಲಿ 2024-25ನೇ ಸಾಲಿನಲ್ಲಿ 2024-25ನೇ ಸಾಲಿನ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮುಗಳಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ಬೆಳೆ ನೋಂದಣಿಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ಹೊಂದಾಣಿಕೆಯಾಗದ ತಿರಸ್ಕøತಗೊಂಡ ಪ್ರಸ್ತಾವನೆಗಳಿಗೆ ರೈತರು ಆಕ್ಷೇಪಣೆ ಸಲ್ಲಿಸಬಹುದಾಗಿದೆ.

ಪ್ರಸ್ತುತ ಸಂರಕ್ಷಣೆ ತಂತ್ರಾಂಶದನ್ವಯ ಕೊಪ್ಪಳ ತಾಲೂಕಿಗೆ ಸಂಬಂಧಿಸಿದಂತೆ ಮುಂಗಾರು 1630, ಹಿಂಗಾರು 754 ಹಾಗೂ ಬೇಸಿಗೆಯ 8 ಪ್ರಸ್ತಾವನೆಗಳು ತಿರಸ್ಕøತಗೊಂಡಿದ್ದು, ವಿಮಾ ಅರ್ಜಿ ತಿರಸ್ಕøತಗೊಂಡ ಬಗ್ಗೆ ಸಂಬಂಧಪಟ್ಟ ರೈತರ ಆಕ್ಷೇಪಣೆ ಇದ್ದಲ್ಲಿ ಮಾತ್ರ ಮರುಪರಿಶೀಲಿಸಲು, ಬೆಳೆ ವಿಮೆಗೆ ನೋಂದಣಿಯಾಗಿರುವ ಬೆಳೆಯನ್ನು ಬೆಳೆದಿರುವ ಕುರಿತು ಅಗತ್ಯ ದಾಖಲೆಗಳೊಂದಿಗೆ ಇದೇ ಏಪ್ರಿಲ್ 17ರ ರೊಳಗಾಗಿ ಕೊಪ್ಪಳದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಮನವಿಯನ್ನು ಸಲ್ಲಿಸಬೇಕು.

ಮನವಿ ಸಲ್ಲಿಸಲು 2024-25ರ ಪಹಣಿ ಪತ್ರಿಕೆಯಲ್ಲಿ (ಆರ್.ಟಿ.ಸಿ) ವಿಮೆಗೆ ನೋಂದಾಯಿಸಿದ ಬೆಳೆ ನಮೂದಾಗಿರಬೇಕು. ಬೆಂಬಲ ಬೆಲೆ ಪ್ರಯೋಜನ ಪಡೆದಿದ್ದಲ್ಲಿ, ಅದರ ರಶೀದಿ ಮತ್ತು ವಿಮೆಗೆ ನೋಂದಾಯಿತ ಬೆಳೆಯ ಉತ್ಪನ್ನವನ್ನು ಎಪಿಎಂಸಿ ಮಾರುಕಟ್ಟೆಗೆ ಮಾರಾಟ ಮಾಡಿದ ರಶೀದಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande