
ಬೆಂಗಳೂರು, 09 ಏಪ್ರಿಲ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ನಲ್ಲಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ಈ ಬಾರಿ ಹಿಂದಿನಂತೆ ಮೊದಲು ಸುದ್ದಿಗೋಷ್ಠಿ ನಡೆಸುವ ಪದ್ಧತಿಗೆ ಬದಲಾಗಿ, ಮೊದಲಿಗೆ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತಿದೆ. ಬಳಿಕ ಸುದ್ದಿಗೋಷ್ಠಿ ನಡೆಯಲಿದೆ. ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಸಂಜೆ 6 ಗಂಟೆಗೆ ಫಲಿತಾಂಶ ಕುರಿತು ಸುದ್ದಿಗೋಷ್ಠಿ ನಡೆಸಲಿದ್ದಾರೆ.
ವಿದ್ಯಾರ್ಥಿಗಳು karresults.nic.in ವೆಬ್ಸೈಟ್ ಮೂಲಕ ಫಲಿತಾಂಶವನ್ನು ಪಡೆಯಬಹುದು. ಜೊತೆಗೆ KarnatakaOne ಮೊಬೈಲ್ ಆಪ್ನಲ್ಲಿಯೂ ಫಲಿತಾಂಶ ಲಭ್ಯವಿರಲಿದೆ. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಪ್ ಹಾಗೂ SMS ಮೂಲಕವೂ ಫಲಿತಾಂಶ ರವಾನೆ ಮಾಡಲಾಗುತ್ತದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa