ಉಪಚುನಾವಣೆ ; ಮತದಾನಕ್ಕೆ ವಿಜಯೇಂದ್ರ ಕರೆ
ಬೆಂಗಳೂರು, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮತದಾರರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಮ
Byv


ಬೆಂಗಳೂರು, 09 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮತದಾರರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಮನವಿ ಮಾಡಿರುವ ಅವರು, ಇಂದು ನಡೆಯುತ್ತಿರುವ ಮತದಾನದಲ್ಲಿ ಎರಡೂ ಕ್ಷೇತ್ರಗಳ ಮತದಾರರು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಅವರು ತಿಳಿಸಿದ್ದಾರೆ. ಪ್ರತಿಯೊಂದು ಮತವೂ ಕ್ಷೇತ್ರದ ಭವಿಷ್ಯ ನಿರ್ಧಾರದಲ್ಲಿ ಮಹತ್ವದ ಪಾತ್ರವಹಿಸುವುದರಿಂದ, ಯಾವುದೇ ನಿರ್ಲಕ್ಷ್ಯ ತೋರಬಾರದು ಎಂದು ಹೇಳಿದರು.

ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತದಾನವೇ ಶಕ್ತಿಯುತ ಸಾಧನವಾಗಿದ್ದು, ವಿಶೇಷವಾಗಿ ಮಹಿಳೆಯರು, ಯುವಕರು ಹಾಗೂ ಮೊದಲ ಬಾರಿಗೆ ಮತದಾನ ಮಾಡುವವರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ತೆರಳಬೇಕು ಎಂದು ಕರೆ ನೀಡಿದ್ದಾರೆ.

“ಸಶಕ್ತ ಕರ್ನಾಟಕದ ನಿರ್ಮಾಣಕ್ಕೆ ನಿಮ್ಮ ಮತ ಅತ್ಯಗತ್ಯ. ಎಲ್ಲರೂ ತಮ್ಮ ಹಕ್ಕನ್ನು ತಪ್ಪದೇ ಚಲಾಯಿಸಿ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು,” ಎಂದು ವಿಜಯೇಂದ್ರ ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande