ಏ. 13 ರಂದು ಕೊಪ್ಪಳದಲ್ಲಿ ನೇರ ಸಂದರ್ಶನ
ಕೊಪ್ಪಳ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ನೇರ ಸಂದರ್ಶನವನ್ನು ಏಪ್ರಿಲ್ 13 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಆಸಕ್ತ 18 ರಿಂದ 34 ವರ್ಷ ನಿರುದ
ಏ. 13 ರಂದು ಕೊಪ್ಪಳದಲ್ಲಿ ನೇರ ಸಂದರ್ಶನ


ಕೊಪ್ಪಳ, 09 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ನೇರ ಸಂದರ್ಶನವನ್ನು ಏಪ್ರಿಲ್ 13 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.

ಆಸಕ್ತ 18 ರಿಂದ 34 ವರ್ಷ ನಿರುದ್ಯೋಗಿ ಪುರಷರು ಹಾಗೂ ಮಹಿಳೆಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು 2 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ (ರೆಸ್ಯೂಮ್) ಹಾಗೂ ಪಾಸ್ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ನೇರ ಸಂದರ್ಶನದಲ್ಲಿ ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande