
ದಾವಣಗೆರೆ, 09 ಏಪ್ರಿಲ್ (ಹಿ.ಸ.):
ಆ್ಯಂಕರ್ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇಕಡಾ 37.17ರಷ್ಟು ಮತದಾನ ದಾಖಲಾಗಿದೆ.
ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆ ಆರಂಭದಿಂದಲೇ ಚುರುಕುಗೊಂಡಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗಳತ್ತ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಬೆಳಗಿನ ವೇಳೆಯಲ್ಲಿ ಕೆಲವು ಕೇಂದ್ರಗಳಲ್ಲಿ ನಿಧಾನಗತಿಯ ಮತದಾನ ಕಂಡುಬಂದರೂ, ನಂತರದ ವೇಳೆಯಲ್ಲಿ ವೇಗ ಹೆಚ್ಚಾಗಿದೆ.
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಮತದಾರರ ಉತ್ತಮ ಪ್ರತಿಕ್ರಿಯೆ ಕಂಡುಬಂದಿದ್ದು, ಮಧ್ಯಾಹ್ನದ ನಂತರ ಮತದಾನ ಪ್ರಮಾಣ ಇನ್ನಷ್ಟು ಏರಿಕೆಯಾಗುವ ನಿರೀಕ್ಷೆ ಇದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa