ಪಿ.ಸಿ.ಎಂ.ಬಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಧಾರವಾಡ, 01 ಮೇ (ಹಿ.ಸ.) : ಆ್ಯಂಕರ್ : ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಧಾರವಾಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹುಬ್ಬಳ್ಳಿಯ ಅಂಚಟಗೇರಿ ಡಾ. ಎಪಿಜೆ ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜು, ಧಾರವಾಡ ಶಿಂಗನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು, ಹುಬ್ಬಳ್ಳಿ ಸದಾಶಿವನಗರದ ಮ
ಪಿ.ಸಿ.ಎಂ.ಬಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ


ಧಾರವಾಡ, 01 ಮೇ (ಹಿ.ಸ.) :

ಆ್ಯಂಕರ್ : ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಧಾರವಾಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹುಬ್ಬಳ್ಳಿಯ ಅಂಚಟಗೇರಿ ಡಾ. ಎಪಿಜೆ ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜು, ಧಾರವಾಡ ಶಿಂಗನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು, ಹುಬ್ಬಳ್ಳಿ ಸದಾಶಿವನಗರದ ಮೌಲಾನಾ ಆಜಾದ ಆಂಗ್ಲ ಮಾದರಿ ಕಾಲೇಜುಗಳಲ್ಲಿ ಪದವಿ ಪೂರ್ವ ತರಗತಿಗಾಗಿ ಪ್ರಥಮ ಪಿಯುಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಮೇ 16, 2026 ರೊಳಗಾಗಿ ಆನ್ಲೈನ್ https://dom.karnataka.gov.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ:0836-2971590, ಪ್ರಾಶುಂಪಾಲರಾದ ವಿಶ್ವನಾಥ ಹುಲಸದಾರ-8310998779, ಶರಣಪ್ಪ ಅಂಗಡಿ–8497847789 ಇರ್ಷಾದಅಹ್ಮದ ದೊಡವಾಡ-8867479317 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande