
ಬಳ್ಳಾರಿ, 01 ಮೇ (ಹಿ.ಸ.) :
ಆ್ಯಂಕರ್ : ಬಳ್ಳಾರಿಯ ಗಾಂಧಿನಗರ ಪೆÇಲೀಸ್ ಠಾಣೆಯ ಪೆÇಲೀಸರು ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿ ಆತನಿಂದ 13 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತನು ಆಂಧ್ರ ಪ್ರದೇಶದ ಹಾಲರವಿ ಸಮೀಪದ ಮಾಚನೂರಿನ ವಲಸೆ ರಾಜ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಯು ಬಳ್ಳಾರಿಯ ಗಾಂಧಿನಗರ, ಬ್ರೂಸ್ಪೇಟೆ ಪೆÇಲೀಸ್ ಠಾಣೆ ಸೇರಿದಂತೆ ವಿವಿಧ ಪೆÇಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬೈಕ್ಗಳನ್ನು ಕಳ್ಳತನ ಮಾಡಿ, ಮಾರಾಟ ಮಾಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್