ಬೆಲೆ ಏರಿಕೆ ವಿರುದ್ಧ ಕೇಂದ್ರದ ವಿರುದ್ದ ಡಿ.ಕೆ ಶಿವಕುಮಾರ್ ಕಿಡಿ
ಬೆಂಗಳೂರು, 01 ಮೇ (ಹಿ.ಸ.) : ಆ್ಯಂಕರ್ : ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಜನಸಾಮಾನ್ಯರ ನೋವನ್ನು ಅರಿತು ಕ್ರಮ ಕೈಗೊಳ್ಳಬೇಕಾಗಿತ್ತು. ಆದರೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಆಕಾಶಕ್ಕೇರಿದ್ದು, ಜನರ ಆದಾಯ ಕುಸಿ
Dks


ಬೆಂಗಳೂರು, 01 ಮೇ (ಹಿ.ಸ.) :

ಆ್ಯಂಕರ್ : ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಜನಸಾಮಾನ್ಯರ ನೋವನ್ನು ಅರಿತು ಕ್ರಮ ಕೈಗೊಳ್ಳಬೇಕಾಗಿತ್ತು. ಆದರೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಆಕಾಶಕ್ಕೇರಿದ್ದು, ಜನರ ಆದಾಯ ಕುಸಿದಿದೆ. ಈ ಸ್ಥಿತಿಗೆ ಹೊಣೆ ಯಾರು?” ಎಂದು ಪ್ರಶ್ನಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಡುಗೆ ಅನಿಲ ಸೇರಿದಂತೆ ವಿವಿಧ ಸೇವೆಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು. ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳದಿಂದ ಹೊಟೇಲ್ಗಳ ಮೇಲೂ ಭಾರೀ ಹೊರೆ ಬಿದ್ದಿದ್ದು, ಅನೇಕ ಹೊಟೇಲುಗಳು ಮುಚ್ಚುವ ಪರಿಸ್ಥಿತಿ ಎದುರಿಸುತ್ತಿವೆ. “ಜನರ ಮೇಲಿನ ಆರ್ಥಿಕ ಭಾರವನ್ನು ಕಡಿಮೆ ಮಾಡುವತ್ತ ಕೇಂದ್ರ ಸರ್ಕಾರ ಗಮನ ಹರಿಸಬೇಕು. ಬೆಲೆ ಏರಿಕೆ ನಿಯಂತ್ರಿಸಿ ಜನರು ನಿಶ್ಚಿಂತೆಯಿಂದ ಬದುಕುವ ಪರಿಸ್ಥಿತಿ ನಿರ್ಮಿಸಬೇಕು” ಎಂದು ಆಗ್ರಹಿಸಿದರು.

ಸಚಿವ ಸಂಪುಟ ಸಭೆಯಲ್ಲಿ ಅಲ್ಪಸಂಖ್ಯಾತರ ಪ್ರದೇಶ ಅಭಿವೃದ್ಧಿಗೆ 600 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, “ಅದನ್ನೇ ಏಕೆ ದೊಡ್ಡದಾಗಿ ಮಾಡುತ್ತೀರಿ? ನಿನ್ನೆ 18 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಬಿಡದಿ ಸಮೀಪ ಸ್ಯಾಟಲೈಟ್ ಟೌನ್ಶಿಪ್ ನಿರ್ಮಾಣಕ್ಕೂ ಅನುಮೋದನೆ ನೀಡಲಾಗಿದೆ. ಆ ವಿಚಾರವನ್ನು ಬಿಟ್ಟು ಅಲ್ಪಸಂಖ್ಯಾತರ ಅನುದಾನವನ್ನೇ ಏಕೆ ಚರ್ಚಿಸುತ್ತೀರಿ?” ಎಂದು ಪ್ರಶ್ನಿಸಿದರು.

ಇದೇ ವೇಳೆ, ನಾಯಕತ್ವ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಬದ್ದವಿರುವುದಾಗಿ ಸ್ಪಷ್ಟಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande