
ಗದಗ, 01 ಮೇ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಶೋದ್ಯಮ ಇಲಾಖೆ , ಪುರತತ್ವ ಸಂಗ್ರಾಲಯಗಳು ಮತ್ತು ಪರಂಪರೆ ಇಲಾಖೆ, ಮೈಸೂರು ಹಾಗೂ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ,ಗದಗ ಇವರುಗಳ ಸಹಯೋಗದಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ 6 ಸ್ಮಾರಕಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ, ದಶ ದೇವಾಲಯ ಮತ್ತು ದಶ ಬಾವಿಗಳ ಅನಾವರಣ, ಪ್ರಾಚ್ಯಾವಶೇಷಗಳ ಅನ್ವೇಷಣೆಯ ಸಪ್ತಾಹ ಕಾರ್ಯಕ್ರಮವನ್ನು ಲಕ್ಕುಂಡಿಯ ಹಾಲಗುಂಡಿ ಬಸವೇಶ್ವರ ದೇವಾಲಯ ಆವರಣದಲ್ಲಿ ಮೇ 02 ರಂದು ಬೆಳಗ್ಗೆ 10:30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.
ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು.
ನರಗುಂದ ಶಾಸಕ ಸಿ.ಸಿ.ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಹಾಗೂ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ , ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ, ಹಾವೇರಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಸಂಸದ ಪಿ.ಸಿ.ಗದ್ದಿಗೌಡರ, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ವಿಧಾನ ಪರಿಷತ್ ಶಾಸಕರುಗಳಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ಗದಗ ತಾಲ್ಲೂಕು ಅಧ್ಯಕ್ಷ ಅಶೋಕ ಮಂದಾಲಿ ಆಗಮಿಸುವರು.
ವಿಶೇಷ ಆಹ್ವಾನಿತರಾಗಿ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ಕೆ. ವಿ. ತ್ರಿಲೋಕಚಂದ್ರ ಹಾಗೂ ಕಾರ್ಯದರ್ಶಿಗಳು, ಯೋಜನೆ ಕಾರ್ಯಕ್ರಮ ಸಂಯೋಜನೆಮತ್ತು ಸಾಂಖ್ಯಿಕ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ವಿ. ವೆಂಕಟೇಶ್, ಪ್ರವಾಸೋದ್ಯಮ ಇಲಾಖೆಯ ಆಯುಕ್ತ ಅಕ್ರಂ ಪಾಷಾ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಶ್ರೀಮತಿ ಜಾನಕಿ ಕೆ.ಎಂ, ಆಗಮಿಸಲಿದ್ದಾರೆ.
ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಮಟ್ಟದ ಸಲಹಾ ಸಮಿತಿ ಸದಸ್ಯರಗಳಾದ ಸಿ. ಜಿ. ಬೆಟಸೂರಮಠ, ಸಿದ್ದಲಿಂಗೇಶ್ವರ .ಎಚ್. ಪಾಟೀಲ, ಶ್ರೀಮತಿ ಗೀತಾಂಜಲಿ ರಾವ್, ಅ. ದ. ಕಟ್ಟಿಮನಿ ಲಕ್ಕುಂಡಿ ಗ್ರಾಮದ ಗುರು-ಹಿರಿಯರು ಆಗಮಿಸುವರು.
ಜಿಲ್ಲಾಧಿಕಾರಿ ಹಾಗೂ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್, ಪುರತತ್ವ ಸಂಗ್ರಾಲಯಗಳು ಮತ್ತು ಪರಂಪರೆ ಇಲಾಖೆ ಆಯುಕ್ತ ದೇವರಾಜು .ಎ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಆಯುಕ್ತ ಡಾ.ಶರಣು ಗೋಗೇರಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ ಉಪಸ್ಥಿತರಿರುವರು.
6 ಸ್ಮಾರಕಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ಹಾಗೂ ಶಿಲಾನ್ಯಾಸ, ಶ್ರೀ ಹಾಲಗುಂಡಿ ಬಸವೇಶ್ವರ ದೇವಾಲಯ ಸಂರಕ್ಷಣೆ ಹಾಗೂ ಅಭಿವೃದ್ಧಿ ಕಾಮಗಾರಿ ರೂ. 1.58 ಕೋಟಿ, ಕನ್ನರ ಬಾವಿ ಸಂರಕ್ಷಣೆ ಹಾಗೂ ಅಭಿವೃದ್ಧಿ ಕಾಮಗಾರಿ ಭಾಗ -2 ರೂ 1.70 ಕೋಟಿ, ಮಲ್ಲಿಕಾರ್ಜುನ ದೇವಾಲಯ ಹಾಗೂ ಗದ್ದುಗೆ ಸಂರಕ್ಷಣೆ ಹಾಗೂ ಅಭಿವೃದ್ಧಿ ಕಾಮಗಾರಿ ರೂ. 1.67 ಕೋಟಿ, ವಿರುಪಾಕ್ಷೇಶ್ವರ ದೇವಾಲಯ ಸಂರಕ್ಷಣೆ ಹಾಗೂ ಅಭಿವೃದ್ಧಿ ಕಾಮಗಾರಿ ರೂ. 1.81 ಕೋಟಿ, ಚಂದ್ರಮೌಳೇಶ್ವರ ದೇವಾಲಯ ಸಂರಕ್ಷಣೆ ಹಾಗೂ ಅಭಿವೃದ್ಧಿ ಕಾಮಗಾರಿ ರೂ. 186 ಕೋಟಿ, ಕಲ್ಮಠ ದ್ವಾರಬಾಗಿಲು ಹಾಗೂ ಬಾವಿ ಸಂರಕ್ಷಣೆ ಹಾಗೂ ಅಭಿವೃದ್ಧಿ ಕಾಮಗಾರಿ ರೂ. 1.54 ಕೋಟಿ.
ದಶ ದೇವಾಲಯಗಳು, ನರಗುಂದವರ ಬಾವಿ ಹತ್ತಿರ ಈಶ್ವರ ದೇವಾಲಯ, ರಾಮಲಿಂಗೇಶ್ವರ ದೇವಾಲಯ, ಕಲ್ಲೇಶ್ವರ ದೇವಾಲಯ, ಹಾಲಗುಂಡಿ ಈಶ್ವರ ಮಂಟಪ, ಮಾಳಿ ಬಾವಿ ಹತ್ತಿರ ಈಶ್ವರ ದೇವಾಲಯ, ಬ್ಯಾಳ ಬಸವಣ್ಣ ದೇವಾಲಯ, ಕೋಟೆ ಕೊತ್ತಲಮ್ಮ ದೇವಾಲಯ, ಕಟಗಿಯವರ ಓಣಿಯ ಈಶ್ವರ ದೇವಾಲಯ, ಲೆಕ್ಕದ ವೀರಣ್ಣ ದೇವಾಲಯ, ಕನ್ನರ ಬಾವಿಯ ಮಾರುತಿ ದೇವಾಲಯ
ದಶ ಬಾವಿಗಳು, ಕುಂಬಾರ ಬಾವಿ-1, ಕುಂಬಾರ ಬಾವಿ - 2, ಹನುಮನ ಬಾವಿ, ಕಣವಿಯವರ ಬಾವಿ, ಅಕ್ಕ ತಂಗಿಯರ ಬಾವಿ, ಶಾವಗಿ ಭರಮಪ್ಪ ಹತ್ತಿರ ಪಾಟೀಲರ ಬಾವಿ, ನರಗುಂದರವರ ಬಾವಿ, ಕಮತರ ಬಾವಿ, ಕುನ್ನಿ ಬಾವಿ, ಕಲ್ಮಠ ಬಾವಿ
ಹಿಂದೂಸ್ತಾನ್ ಸಮಾಚಾರ್ / lalita MP