ತಾತ್ಕಾಲಿಕ ಆಯ್ಕೆ ಪಟ್ಟಿ ; ಆಕ್ಷೇಪಣೆಗಳಿಗೆ ಆಹ್ವಾನ
ಧಾರವಾಡ, 01 ಮೇ (ಹಿ.ಸ.) : ಆ್ಯಂಕರ್ : ಪ್ರವಾಸೋದ್ಯಮ ಇಲಾಖೆಯ 2025-26 ನೇ ಸಾಲಿನ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ ಮೊಬೈಲ್ ಕ್ಯಾಂಟೀನ್ ಯೋಜನೆ ಅಡಿಯಲ್ಲಿ ಸ್ವೀಕೃತ ಅರ್ಜಿಗಳ ಪರಿಶೀಲನೆ ಮಾಡಿ, ಫಲಾನುಭವಿ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ತಯಾರಿಸಲಾಗಿದ್ದು, ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲ
ತಾತ್ಕಾಲಿಕ ಆಯ್ಕೆ ಪಟ್ಟಿ ; ಆಕ್ಷೇಪಣೆಗಳಿಗೆ ಆಹ್ವಾನ


ಧಾರವಾಡ, 01 ಮೇ (ಹಿ.ಸ.) :

ಆ್ಯಂಕರ್ : ಪ್ರವಾಸೋದ್ಯಮ ಇಲಾಖೆಯ 2025-26 ನೇ ಸಾಲಿನ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ ಮೊಬೈಲ್ ಕ್ಯಾಂಟೀನ್ ಯೋಜನೆ ಅಡಿಯಲ್ಲಿ ಸ್ವೀಕೃತ ಅರ್ಜಿಗಳ ಪರಿಶೀಲನೆ ಮಾಡಿ, ಫಲಾನುಭವಿ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ತಯಾರಿಸಲಾಗಿದ್ದು, ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಆಕ್ಷೇಪಣೆ ಉಳ್ಳವರು ತಮ್ಮ ಆಕ್ಷೇಪಣೆಯನ್ನು ಲಿಖಿತ ರೂಪದಲ್ಲಿ ಪ್ರವಾಸೋದ್ಯಮ ಇಲಾಖೆ, ಧಾರವಾಡ ಕಛೇರಿಗೆ ಮೇ 06, 2026 ರ ಸಂಜೆ ಸಂಜೆ 4.30 ರೊಳಗಾಗಿ ಸಲ್ಲಿಸಬೇಕು. ಅವಧಿ ಮೀರಿ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande