ಬುದ್ಧ ಪೂರ್ಣಿಮೆಗೆ ರಾಷ್ಟ್ರಪತಿ, ಉಪರಾಷ್ಟ್ರಪತಿ ಸೇರಿದಂತೆ ನಾಯಕರ ಶುಭಾಶಯ
ನವದೆಹಲಿ, 01 ಮೇ (ಹಿ.ಸ.) : ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಸೇರಿದಂತೆ ದೇಶದ ಅನೇಕ ಗಣ್ಯರು ಬುದ್ಧ ಪೂರ್ಣಿಮೆ ಪ್ರಯುಕ್ತ ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ ಸಂದೇಶದಲ್ಲಿ, “ಬುದ್ಧ ಪೂರ್ಣ
ಬುದ್ದ


ನವದೆಹಲಿ, 01 ಮೇ (ಹಿ.ಸ.) :

ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಸೇರಿದಂತೆ ದೇಶದ ಅನೇಕ ಗಣ್ಯರು ಬುದ್ಧ ಪೂರ್ಣಿಮೆ ಪ್ರಯುಕ್ತ ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ ಸಂದೇಶದಲ್ಲಿ, “ಬುದ್ಧ ಪೂರ್ಣಿಮೆಯ ಸಂದರ್ಭದಲ್ಲಿ ಎಲ್ಲಾ ನಾಗರಿಕರಿಗೆ ಹಾಗೂ ಗೌತಮ ಬುದ್ಧ ಅವರ ಅನುಯಾಯಿಗಳಿಗೆ ಹೃತ್ಪೂರ್ವಕ ಶುಭಾಶಯಗಳು. ಬುದ್ಧನ ಬೋಧನೆಗಳು ಸಹಾನುಭೂತಿ, ಅಹಿಂಸೆ ಮತ್ತು ಜ್ಞಾನೋದಯದ ದಾರಿಯನ್ನು ತೋರಿಸುತ್ತವೆ” ಎಂದು ಹೇಳಿದ್ದಾರೆ.

ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಅವರು, “ಬುದ್ಧನ ಶಾಂತಿ, ಸಾಮರಸ್ಯ ಮತ್ತು ನಿಸ್ವಾರ್ಥ ಸೇವೆಯ ಸಂದೇಶವು ಇಂದಿನ ಜಗತ್ತಿಗೆ ಅತ್ಯಂತ ಪ್ರಸ್ತುತವಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು, “ವೈಶಾಖ ಪೂರ್ಣಿಮೆ ಕೇವಲ ಹಬ್ಬವಲ್ಲ ಇದು ಆತ್ಮಾವಲೋಕನ ಮತ್ತು ಆಧ್ಯಾತ್ಮಿಕ ಪ್ರಗತಿಯ ಸಂಕೇತ” ಎಂದು ತಿಳಿಸಿದ್ದಾರೆ.

ಅಮಿತ್ ಶಾ ಅವರು, “ಬುದ್ಧನ ತತ್ವಗಳು ಮಾನವೀಯತೆ ಮತ್ತು ಶಾಂತಿಯ ಮಾರ್ಗದಲ್ಲಿ ನಮ್ಮನ್ನು ಮುನ್ನಡೆಸುತ್ತವೆ” ಎಂದು ಹೇಳಿದ್ದಾರೆ.

ಇದೇ ವೇಳೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ರಾಜನಾಥ್ ಸಿಂಗ್, ಶಿವರಾಜ್ ಸಿಂಗ್ ಚೌಹಾಣ್ , ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಕಿರಣ್ ರಿಜಿಜು, ಬುದ್ಧನ ಶಾಂತಿ, ಅಹಿಂಸೆ ಮತ್ತು ಕರುಣೆಯ ಸಂದೇಶವನ್ನು ಸ್ಮರಿಸಿ ಶುಭಾಶಯಗಳನ್ನು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande