
ಬೆಂಗಳೂರು, 01 ಮೇ (ಹಿ.ಸ.) :
ಆ್ಯಂಕರ್ : ಭಾರತ ಹವಾಮಾನ ಇಲಾಖೆ ಬಿಡುಗಡೆ ಮಾಡಿದ ಮುನ್ಸೂಚನೆಯ ಪ್ರಕಾರ, ಮುಂದಿನ ಏಳು ದಿನಗಳ ಕಾಲ ರಾಜ್ಯದಾದ್ಯಂತ ಒಣಹವೆಯೊಂದಿಗೆ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.
ಮಧ್ಯಾಹ್ನ ನಂತರ ಹಲವೆಡೆ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯ ಎಚ್ಚರಿಕೆ ನೀಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa