ಶಿಗ್ಗಾಂವಿ ಕ್ಷೇತ್ರದ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ : ಶಾಸಕ ಯಾಸಿರಖಾನ್ ಪಠಾಣ್
ಹಾವೇರಿ, 10 ಮೇ (ಹಿ.ಸ.) : ಆ್ಯಂಕರ್ : ಶಿಗ್ಗಾಂವಿ ವಿಧಾನ ಸಭಾ ಕ್ಷೇತ್ರದ ಅಭಿವೃದ್ಧಿಯ ಪಥದಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಾಗಿ ತಡಸ ಹಾಗೂ ಹುಲಗೂರು ಪೊಲೀಸ್ ಠಾಣೆಗಳಿಗೆ ಎರಡು ಹೊಸ ವಾಹನಗಳನ್ನು ಹಸ್ತಾಂತರಿಸಲಾಯಿತು ಎಂದು ಶಾಸಕ ಯಾಸಿರಖಾನ್ ಪಠಾಣ್ ತಿಳಿಸಿದ್ದಾರೆ. ತಡಸ ಮತ್ತು ಹುಲಗೂರು ಪೊಲೀಸ್ ಠ
ವಾಹನ ಹಸ್ತಾಂತರ


ಹಾವೇರಿ, 10 ಮೇ (ಹಿ.ಸ.) :

ಆ್ಯಂಕರ್ : ಶಿಗ್ಗಾಂವಿ ವಿಧಾನ ಸಭಾ ಕ್ಷೇತ್ರದ ಅಭಿವೃದ್ಧಿಯ ಪಥದಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಾಗಿ ತಡಸ ಹಾಗೂ ಹುಲಗೂರು ಪೊಲೀಸ್ ಠಾಣೆಗಳಿಗೆ ಎರಡು ಹೊಸ ವಾಹನಗಳನ್ನು ಹಸ್ತಾಂತರಿಸಲಾಯಿತು ಎಂದು ಶಾಸಕ ಯಾಸಿರಖಾನ್ ಪಠಾಣ್ ತಿಳಿಸಿದ್ದಾರೆ.

ತಡಸ ಮತ್ತು ಹುಲಗೂರು ಪೊಲೀಸ್ ಠಾಣೆಗಳಿಗೆ ಹೊಸ ವಾಹನಗಳನ್ನು ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಜನಸೇವೆಯಲ್ಲಿ ತೊಡಗಿರುವ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಇನ್ನಷ್ಟು ಹೆಚ್ಚಳವಾಗಬೇಕು. ಗ್ರಾಮೀಣ ಭಾಗಗಳಲ್ಲಿ ತುರ್ತು ಸೇವೆ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಭದ್ರತೆಗೆ ಈ ವಾಹನಗಳು ಸಹಕಾರಿಯಾಗಲಿವೆ” ಎಂದು ಹೇಳಿದರು.

ಪೊಲೀಸ್ ಇಲಾಖೆ ಜನರ ವಿಶ್ವಾಸವನ್ನು ಉಳಿಸಿಕೊಂಡು ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದು ಆಶಿಸಿದ ಅವರು, ಶಿಗ್ಗಾಂವಿ ಕ್ಷೇತ್ರದಲ್ಲಿ ಮೂಲಸೌಕರ್ಯ ಮತ್ತು ಸಾರ್ವಜನಿಕ ಸೇವೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.

ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande