

ಬಳ್ಳಾರಿ, 10 ಮೇ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಹೇಮರೆಡ್ಡಿ ಮಲ್ಲಮ್ಮ ಜಯಂತಿ'ಯನ್ನು ಭಾನುವಾರ ಅತ್ಯಂತ ಸರಳವಾಗಿ ಆಚರಿಸಲಾಯಿತು.
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಶೋಕ ಆಚರಿಸಲಾಗುತ್ತಿದ್ದು, ಸಚಿವರ ನಿಧನಕ್ಕೆ ಗೌರವ ಸೂಚಿಸುವ ಸಲುವಾಗಿ ಕೇವಲ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸಾಂಕೇತಿಕವಾಗಿ ಜಯಂತಿಯನ್ನು ಆಚರಿಸಲಾಯಿತು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿ ಸಭಾಂಗಣದಲ್ಲಿ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು ಹಾಗೂ ಇದೇ ಸಂದರ್ಭದಲ್ಲಿ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಹಾಗೂ ಇಲಾಖೆಯ ಸಿಬ್ಬಂದಿ ವರ್ಗ ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್