
ಗದಗ, 10 ಮೇ (ಹಿ.ಸ.) :
ಆ್ಯಂಕರ್ : ಯೋಜನಾ ಮತ್ತು ಸಾಂಖ್ಯಿಕ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ ಅವರ ನಿಧನಕ್ಕೆ ಕಾನೂನು, ನ್ಯಾಯ, ಸಂಸದೀಯ ವ್ಯವಹಾರಗಳು, ಶಾಸನರಚನೆ, ಮಾನವ ಹಕ್ಕುಗಳು ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಅತೀವ ಶೋಕ ವ್ಯಕ್ತಪಡಿಸಿದ್ದಾರೆ.
ಸಮಾಜದ ಅಭಿವೃದ್ಧಿ ಹಾಗೂ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದ ಸಚಿವ ಡಿ.ಸುಧಾಕರ ಅವರು ಜನಪರ ಚಿಂತನೆ ಮತ್ತು ಅಭಿವೃದ್ಧಿ ಪರ ಕೆಲಸಗಳ ಮೂಲಕ ಜನಮನದಲ್ಲಿ ವಿಶೇಷ ಸ್ಥಾನ ಪಡೆದಿದ್ದರು. ಅವರ ನಿಧನದ ಸುದ್ಧಿ ನನಗೆ ಅತೀವ ದುಃಖ ತಂದಿದೆ. ಓರ್ವ ಸಹಪಾಠಿ ಹಾಗೂ ಹಿತೈಷಿಯನ್ನು ಕಳೆದುಕೊಂಡಂತಾಗಿದೆ. ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬದ ಸದಸ್ಯರಿಗೆ ಹಾಗೂ ಅಭಿಮಾನಿಗಳಿಗೆ ನೀಡಲಿ ಹಾಗೂ ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP